ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ( Mysore Dasara 2022 ) ಆಚರಣೆಗೆ ದಿನಾಂಕ ನಿಗದಿ ಪಡಿಸಲಾಗಿದೆ. ಮೈಸೂರು ದಸರಾ ನಿಮಿತ್ತ ನಡೆಯುವಂತ ಜಂಬೂಸವಾರಿಯನ್ನು ಅಕ್ಟೋಬರ್ 5ರಂದು ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೈಸೂರು ಅರಮನೆಯಲ್ಲಿ ಸಿದ್ಧತೆ ಆರಂಭವಾಗಿದೆ. ಸೆ.20ರ ಮಂಗಳವಾರದಿಂದ ಸಿಂಹಾಸನ ಜೋಡಣೆ ಆರಂಭವಾಗಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರಗೆ ಅರಮನೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸೆ.26ರಂದು ಖಾಸಗಿ ದರ್ಬಾರ್ ಹಾಗೂ ವಿವಿಧ ಪೂಜೆಗಳು, ಧಾರ್ಮಿಕ ವಿಧಿಗಳು ನೆರವೇರಲಿವೆ.
ಅಕ್ಟೋಬರ್ 4ರಂದು ಅರಮನೆಯಲ್ಲಿ ಆಯುಧಪೂಜೆ ನಡೆಯಲಿದೆ. ಅ.5ರಂದು ವಿಜಯದಶಮಿ ಆಚರಣೆ ಇರುತ್ತದೆ. ಅ.20ರಂದು ಸಿಂಹಾಸನ ವಿಸರ್ಜನೆ ಹಿನ್ನೆಲೆಯಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಇರುತ್ತದೆ.
ಪ್ರಸಕ್ತ ಸಾಲಿನ ಮೈಸೂರು ದಸರಾ ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ( President draupadi murmu ) ಅವರು ಉದ್ಘಾಟಿಸಲಿದ್ದಾರೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಘೋಷಣೆ ಮಾಡಿದ್ದಾರೆ.