ನ್ಯೂಯಾರ್ಕ್ : ಖ್ಯಾತ ಬರಹಗಾರ ಸಲ್ಮಾನ್ ರಶ್ದಿ ಅವರ ಮೇಲೆ ನ್ಯೂಯಾರ್ಕ್ ನಗರದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದು, ಸಲ್ಮಾನ್ ರಶ್ದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸಲ್ಮಾನ್ ರಶ್ದಿ ಅವರು ಪಶ್ಚಿಮ ನ್ಯೂಯಾರ್ಕ್ನ ಚೌಟೌಕ್ವಾ ಇನ್ಸ್ಟಿಟ್ಯೂಟ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮ್ಮ ಉಪನ್ಯಾಸವನ್ನು ಪ್ರಾರಂಭಿಸಲು ಹೊರಟಾಗ ವ್ಯಕ್ತಿಯೊಬ್ಬ ವೇದಿಕೆಯ ಮೇಲೆ ಹತ್ತಿ ರಶ್ದಿಯನ್ನು ಹೊಡೆದು ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಸಲ್ಮಾನ್ ರಶ್ದಿ ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ರಶ್ದಿ ಅವರ ದೇಹದ ಮೇಲೆ ಹಲವಾರು ಇರಿತದ ಗಾಯಗಳಿವೆ, ಒಂದು ಅವರ ಕುತ್ತಿಗೆಯ ಬಲಭಾಗದಲ್ಲಿ ಗಾಯಗಳಾಗಿದ್ದು, ಗಂಟೆಗಳ ಶಸ್ತ್ರಚಿಕಿತ್ಸೆಯ ನಂತರ ರಶ್ದಿ ವೆಂಟಿಲೇಟರ್ ನಲ್ಲಿದ್ದಾರೆ. ಅಮೆರಿಕ ಅಧ್ಯಕ್ಷರ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವರು ಸಲ್ಮಾನ್ ರಶ್ದಿ ಮೇಲಿನ ಹಲ್ಲೆ ಖಂಡನೀಯ ಎಂದು ಹೇಳಿದ್ದಾರೆ. ಅವರ ಶೀಘ್ರ ಚೇತರಿಕೆಗಾಗಿ ನಾವೆಲ್ಲರೂ ಪ್ರಾರ್ಥಿಸುತ್ತಿದ್ದೇವೆ. ಇಷ್ಟು ವೇಗವಾಗಿ ಸಹಾಯ ಮಾಡಿದ್ದಕ್ಕಾಗಿ ನಾವು ನಾಗರಿಕರಿಗೆ ಕೃತಜ್ಞರಾಗಿದ್ದೇವೆ ಎಂದು ಹೇಳಿದ್ದಾರೆ.