ಬೆಂಗಳೂರು : ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ. ಇದನ್ನು ಸರ್ವಶನಾಶ ಮಾಡಿದ್ದೀರಿ. ಹಿಂಸೆಯ ಎಂಬ ವಿಷಸರ್ಪದ ಹೆಡೆಯಡಿ ಕಟ್ಟಿರುವ ನಿಮ್ಮ ಸಾಮ್ರಾಜ್ಯ ಹಿಂಸೆಗೇ ಬಲಿ ಆಗುವುದು ಖಚಿತ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
KCET Results 2022 : ಯಲಹಂಕ ನ್ಯಾಷನಲ್ ಕಾಲೇಜಿನ ಅಪೂರ್ವ ` First Rank’ : ಇಲ್ಲಿದೆ `Rank’ ಪಡೆದವರ ಪಟ್ಟಿ!
ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ. ಇದನ್ನು ಸರ್ವಶನಾಶ ಮಾಡಿದ್ದೀರಿ. ಹಿಂಸೆಯ ಎಂಬ ವಿಷಸರ್ಪದ ಹೆಡೆಯಡಿ ಕಟ್ಟಿರುವ ನಿಮ್ಮ ಸಾಮ್ರಾಜ್ಯ ಹಿಂಸೆಗೇ ಬಲಿ ಆಗುವುದು ಖಚಿತ. ಕಾರ್ಯಕರ್ತರ ನೆತ್ತರಿನ ಮೇಲಿನ ಅಧಿಕಾರದ ಸುಖಕ್ಕೆ ಅದೇ ಕಾರ್ಯಕರ್ತರ ಆಕ್ರೋಶವೇ ಚರಮಗೀತೆ ಬರೆಯಲಿದೆ. ಕರಾವಳಿ ಕೆರಳಿದೆ, ಕರ್ನಾಟಕ ಕೆರಳುವುದು ಬಾಕಿ ಇದೆ ಕಿಡಿಕಾರಿದ್ದಾರೆ.
ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ. ಇದನ್ನು ಸರ್ವಶನಾಶ ಮಾಡಿದ್ದೀರಿ.
ಹಿಂಸೆಯ ಎಂಬ ವಿಷಸರ್ಪದ ಹೆಡೆಯಡಿ ಕಟ್ಟಿರುವ ನಿಮ್ಮ ಸಾಮ್ರಾಜ್ಯ ಹಿಂಸೆಗೇ ಬಲಿ ಆಗುವುದು ಖಚಿತ. ಕಾರ್ಯಕರ್ತರ ನೆತ್ತರಿನ ಮೇಲಿನ ಅಧಿಕಾರದ ಸುಖಕ್ಕೆ ಅದೇ ಕಾರ್ಯಕರ್ತರ ಆಕ್ರೋಶವೇ ಚರಮಗೀತೆ ಬರೆಯಲಿದೆ.ಕರಾವಳಿ ಕೆರಳಿದೆ, ಕರ್ನಾಟಕ ಕೆರಳುವುದು ಬಾಕಿ ಇದೆ. 8/8
— H D Kumaraswamy (@hd_kumaraswamy) July 30, 2022
Shocking: ಮುಂಬೈನಲ್ಲಿ ವಿಚಿತ್ರ ಘಟನೆ : ಮ್ಯಾಗಿ ಸೇವಿಸಿ ಮಹಿಳೆ ಸಾವು
ರಾಜಧರ್ಮ ಪಾಲಿಸಿ ಎಂದು ಹಿಂದೊಮ್ಮೆ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರು ಹೇಳಿದ್ದರು.ರಾಜಧರ್ಮ ಪಾಲಿಸುವುದಿರಲಿ, ಸ್ವಧರ್ಮವೇ ಹೇಳಿದ ʼಸರ್ವೇ ಜನೋ ಸುಖಿನೋ ಭವಂತುʼ ಎನ್ನುವ ತತ್ತ್ವವನ್ನೂ ಪಾಲಿಸುತ್ತಿಲ್ಲ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಂವಿಧಾನದ ಮೇಲೆ ಗೌರವ ಇಲ್ಲದವರು ʼಬುಲ್ಡೋಜರ್ʼ ಬಗ್ಗೆ ಮಾತನಾಡುತ್ತಾರೆ. ದಕ್ಷತೆ ಇಲ್ಲದವರು ಅಕ್ಕಪಕ್ಕದ ಮಾದರಿಗಳನ್ನು ಹುಡುಕುತ್ತಾರೆ. ಜನತಾ ಪರಿವಾರಿ ಆಗಿದ್ದವರು ಈಗ ಸಂಘ ಪರಿವಾರಿಯಾಗಿ ರೂಪಾಂತರಗೊಂಡು ಉತ್ತರ ಪ್ರದೇಶದ ಮಾದರಿ ಹೆಸರಿನಲ್ಲಿ ರಾಜ್ಯಕ್ಕೆ ʼಹೊಸ ಮಾರಿʼಯನ್ನು ತರಲು ಹೊರಟಿದ್ದಾರೆ. ಇದು ಬೇಕಿಲ್ಲ ಎಂದಿದ್ದಾರೆ.
ಎಂ.ಎನ್.ರಾಯ್ ಅವರ ಅನುಯಾಯಿ, ಜನತಾ ಪರಿವಾರದ ರಾಯಿಸ್ಟ್ ಎಂದೇ ಖ್ಯಾತರಾಗಿದ್ದ ಎಸ್.ಆರ್.ಬೊಮ್ಮಾಯಿ ಅವರ ಪುತ್ರ ಬಸವರಾಜ ಬೊಮ್ಮಾಯಿ ಈಗ ಸಂವಿಧಾನ ವಿರೋಧಿಯಾದ ಬುಲ್ಡೋಜರ್ ಮಾದರಿ ಮಾತನಾಡುತ್ತಿರುವುದು ನನಗೆ ಅತೀವ ಆಘಾತ ಉಂಟು ಮಾಡಿದೆ ಎಂದಿದ್ದಾರೆ.
ಬೆಳ್ಳಾರೆ ಬೇಗೆ ಇಡೀ ಕರಾವಳಿಯನ್ನು ವ್ಯಾಪಿಸಿದೆ. ಆದರೆ, ಜೀವ ಭಯದಲ್ಲಿರುವ ಎರಡು ಕೋಮುಗಳ ಜನರು ನೆಮ್ಮದಿಯಿಂದ ಬದುಕಲು ಏನು ಮಾಡಿದ್ದೀರಿ ಬಸವರಾಜ ಬೊಮ್ಮಾಯಿ ಅವರೇ? ಅವರ ಜೀವಕ್ಕೆ ಏನು ಖಾತರಿ ಕೊಟ್ಟಿದ್ದೀರಿ? ಪ್ರತಿ ಕೊಲೆ ಆದಾಗಲೂ ಈ ಕೊಲೆಪಾತಕ ರಾಜಕಾರಣ ನಮ್ಮ ಕುಟುಂಬಕ್ಕೇ ಕೊನೆಯಾಗಲಿ ಎನ್ನುವ ತಾಯಂದಿರ ಆರ್ತನಾದಕ್ಕೆ ನಿಮ್ಮ ಉತ್ತರವೇನು? ಎಂದು ಪ್ರಶ್ನಿಸಿದ್ದಾರೆ.