ಬೆಂಗಳೂರು : ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತಿ ಕ್ಷೇತ್ರಗಳ ಮರು ವಿಂಗಡಣೆ ಮತ್ತು ಮೀಸಲು ನಿಗದಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮತ್ತೆ 12 ವಾರಗಳ ಕಾಲಾವಕಾಶ ನೀಡಿದೆ.
ಸಾರ್ವಜನಿಕರೇ ಗಮನಿಸಿ : ತಾಂತ್ರಿಕ ದೋಷ ನಿವಾರಣೆ : ಸಹಜ ಸ್ಥಿತಿಗೆ ಮರಳಿದ `108 ಆ್ಯಂಬುಲೆನ್ಸ್’ ಸೇವೆ
ರಾಜ್ಯದಲ್ಲಿನ 31 ಜಿಲ್ಲಾಪಂಚಾಯತ್ ಮತ್ತು 239 ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲಾ ರೀತಿಯ ಮೀಸಲಾತಿಯನ್ನು 12 ವಾರದೊಳಗೆ ಮರು ನಿಗದಿಪಡಿಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.
ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಮುಂದಾಗಿರುವುದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಈ ಅರ್ಜಿ ಹಂಗಾಮಿ ಮುಖ್ಯ ನ್ಯಾ.ಅಲೋಕ್ ಅರಾಧೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ವೇಳೆ ಸರ್ಕಾರದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮರು ವಿಂಗಡಣೆಗೆ ಆಯೋಗವು ಕಾಲಾವಕಾಶ ಕೋರಿದ್ದಕ್ಕೆ 12 ವಾರ ಸಮಯ ನೀಡುವಂತೆ ಕೋರಿದರು.
BREAKING NEWS : ಇಂದು ಜಪಾನ್ ಮಾಜಿ ಪಿಎಂ ʻಶಿಂಜೋ ಅಬೆʼ ಅಂತಿಮ ಸಂಸ್ಕಾರ: ಟೋಕಿಯೊ ತಲುಪಿದ ಪ್ರಧಾನಿ ಮೋದಿ