ಬೆಂಗಳೂರು : ಗಲಭೆ ಸಂಚು ನಡೆಸಿದ ಆರೋಪದಡಿ ರಾಜ್ಯದ ವಿವಿಧೆಡೆ ಇತ್ತೀಚೆಗೆ ಬಂಧಿತರಾಗಿದ್ದ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ 15 ಮುಖಂಡರ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆ (UAPA) ಅಡಿ ಪ್ರಕರಣ ದಾಖಲಾಗಿದೆ.
BIGG NEWS : ಪರೇಶ್ ಮೇಸ್ತಾ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಮೇಸ್ತಾ ಸಾವು ಕೊಲೆಯಲ್ಲ, ಆಕಸ್ಮಿಕ!
15 ಪಿಎಫ್ ಐ ಮುಖಂಡರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸೋಮವಾರ ಕೆ.ಜಿ.ಹಳ್ಳಿ ಠಾಣೆ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ಮಾಡಿದ ನ್ಯಾಯಾಲಯವು ಆರೋಪಿಗಳನ್ನು 15 ದಿನಗಳ ಕಾಲ ನ್ಯಾಯಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.
ಇನ್ನು ಆರೊಪಿಗಲ ವಿರುದ್ಧ ಯುಎಪಿಎ ಹಾಕಲು ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಆರೋಪಿಗಳ ವಿರುದ್ಧ ಯುಎಪಿಎ ಕಾಯ್ದೆ ಹಾಕಲು ಆದೇಶಿಸಿದೆ. ಜೊತೆಗೆ ನ್ಯಾಯಾಲಯವು ಅ.6 ರಂದು ಆರೋಪಿಗಳನ್ನು ಎನ್ ಐಎ ವಿಶೇಷ ಕೋರ್ಟ್ ಎದುರು ಹಾಜರುಪಡಿಸುವಂತೆ ಸೂಚಿಸಿ, ವಿಚಾರಣೆ ಮುಂದೂಡಿದೆ.