ಜೈಪುರ : ನಿಯಂತ್ರಣ ತಪ್ಪಿದ ಡಂಪರ್ ಟ್ರಕ್ ಸುಮಾರು 17 ವಾಹನಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೃತಪಟ್ಟವರ ಸಂಖ್ಯೆ 19ಕ್ಕೇ ಏರಿಕೆಯಾಗಿದೆ. ಇನ್ನು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಡಂಪರ್ ಲೋಹಾ ಮಂಡಿಯಿಂದ ಜೈಪುರ-ಸಿಕಾರ್ ರಸ್ತೆಯ ಕಡೆಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಕಾರಿಗೆ ಡಿಕ್ಕಿ ಹೊಡೆದ ನಂತರ ಟ್ರಕ್ ಸಮತೋಲನ ಕಳೆದುಕೊಂಡು ಹಲವು ಸಣ್ಣ ವಾಹನವನ್ನು ಸಂಪೂರ್ಣವಾಗಿ ಪುಡಿಪುಡಿ ಮಾಡಿತು. ಒಂದು ಮೋಟಾರ್ ಬೈಕ್ ಮತ್ತು ಇತರ ಎರಡು ಕಾರುಗಳು ಸೇರಿದಂತೆ ಇತರ 17 ವಾಹನಗಳು ಸಹ ಅಪಘಾತದಲ್ಲಿ ಸಿಲುಕಿಕೊಂಡವು.
ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಮತ್ತು ಗಾಯಗೊಂಡವರಿಗೆ ಆರ್ಥಿಕ ನೆರವು ಘೋಷಿಸಿದ್ದಾರೆ.
“ರಾಜಸ್ಥಾನದ ಜೈಪುರದಲ್ಲಿ ಸಂಭವಿಸಿದ ಅಪಘಾತದಿಂದ ಉಂಟಾದ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ತಮ್ಮ ಆಪ್ತರನ್ನು ಮತ್ತು ಆತ್ಮೀಯರನ್ನು ಕಳೆದುಕೊಂಡವರೊಂದಿಗೆ ನನ್ನ ಸಂತಾಪ. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ಪ್ರಧಾನ ಮಂತ್ರಿಗಳು ಪ್ರತಿ ಬಲಿಪಶುವಿನ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50,000 ರೂ. ಪರಿಹಾರವನ್ನು ಘೋಷಿಸಿದರು.
ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಬಲಿಪಶುಗಳ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ಸಹಾಯ ಮತ್ತು ಗಾಯಾಳುಗಳಿಗೆ ಸರಿಯಾದ ವೈದ್ಯಕೀಯ ಆರೈಕೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
‘AI’ನಿಂದಾಗಿ ಭಾರತದ ಅರ್ಧದಷ್ಟು ಜನ ಉದ್ಯೋಗ ಕಳೆದುಕೊಳ್ಳುವ ಭಯದಲ್ಲಿದ್ದಾರೆ : ವರದಿ
ಗ್ರೇಟರ್ ಮೈಸೂರು ಆಗಬೇಕು: ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿ.ಎಂ.ಸಿದ್ದರಾಮಯ್ಯ








