ಬೆಂಗಳೂರು: ಆರು ವರ್ಷದ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಜೊತೆಗೆ ಸಂಚಾರ ನಿಯಮಗಳನ್ನು ಅನುಸರಿಸದವರ ವಿರುದ್ಧ ಸೂಕ್ತ ಕ್ರಮ ಹಾಗೂ ಕಟ್ಟುನಿಟ್ಟಾಗಿ ದಂಡ ವಿಧಿಸಲು ಸಂಚಾರಿ ಪೊಲೀಸರು ಮುಂದಾಗಿದ್ದಾರೆ ಎನ್ನುವ ಸುದ್ದಿಯೊಂದು ವೈರಲ್ ಆಗಿತ್ತು, ಇದಲ್ಲದೇ ಕೆಲವು ಮಾಧ್ಯಮಗಳು ಕೂಡ ಸುದ್ದಿಯನ್ನು ಪ್ರಕಟ ಮಾಡಿದ್ದವು. ಈ ನಡುವೆ ಇದಕ್ಕೆ ಸಂಬಂಧಪಟ್ಟಂತೆ ಸ್ಪಷ್ಟನೆಯನ್ನು ಬೆಂಗಳೂರು ಪೊಲೀಸರು ನೀಡಿದ್ದಾರೆ.
ಹೆಲೈಟ್ ಹಾಕದ 6 ವರ್ಷದ ಮೇಲ್ಪಟ್ಟ ಮಕ್ಕಳ ವಿಚಾರವಾಗಿ ಪೊಲೀಸರು ಪ್ರಕರಣ ದಾಖಲಿಸುತ್ತಾರೆ ಎಂಬುದು ಕೇವಲ ವದಂತಿ ಎಂದು ಸಂಚಾರ ವಿಭಾಗದ ಜಂಟಿ ಆಯುಕ್ತ (ಸಂಚಾರ) ಎಂ.ಎನ್.ಅನುಚೇತ್ ಸ್ಪಷ್ಟಪಡಿಸಿದ್ದು, ಇದೇ ವೇಳೇ ಅವರು 6 ವರ್ಷ ಮೇಲ್ಪಟ್ಟ ಎಲ್ಲರೂ (ಸವಾರ ಹಾಗೂ ಹಿಂಬದಿ ಸವಾರರು) ಕಡ್ಡಾಯವಾಗಿ ಹೆಲೈಟ್ ಧರಿಸಬೇಕು ಎಂಬ ನಿಯಮವಿದೆ.ಈ ನಿಯಮವು ಹೊಸದೇನೂ ಅಲ್ಲ, ಆದರೆ ಈ ಸಂಬಂಧ ಸಂ ಚಾರ ಪೊಲೀಸರಿಗೆ, ಶಾಲೆಗಳ ಬಳಿ ವಿಶೇಷ ಕಾರ್ಯಾಚರಣೆ ನಡೆಸುವ ಯಾವುದೇ ಚಿಂತನೆ ಇಲ್ಲ ಅಂತ ಹೇಳಿದ್ದಾರೆ.