ಬೆಂಗಳೂರು : ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ನಿದ್ದೆ ಮಾಡಿ, ಈಗ ಚುನಾವಣೆಯೆಂದು ತಟ್ಟನೆ ಎಚ್ಚರಗೊಂಡು ಹಳೆ ಮೈಸೂರು ಭಾಗದ ಬಗ್ಗೆ ಮಾತಾಡುತ್ತಿದ್ದಾರೆ ಸಿದ್ದರಾಮಯ್ಯ ವಿರುದ್ಧ ಟ್ವೀಟರ್ ನಲ್ಲಿ ಬಿಜೆಪಿ ವಾಗ್ದಾಳಿ ನಡೆಸಿದೆ.
BIGG NEWS : ಬೆಂಗಳೂರಿನಲ್ಲಿ ಆತಂಕ ಹುಟ್ಟಿಸಿದ ಕೊರೊನಾ : ಸಕ್ರಿಯ ಪ್ರಕರಣಗಳ ಸಂಖ್ಯೆ 1,209 ಕ್ಕೆ ಏರಿಕೆ!
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಪಕ್ಷ ಈ ಭಾಗದ ಅಭಿವೃದ್ಧಿಗಾಗಿ ಏನೂ ಮಾಡಲಿಲ್ಲ. ಸ್ವತಃ ಮುಖ್ಯಮಂತ್ರಿಯಾಗಿದ್ದ ಈ ಭಾಗದವರಾದ ಸಿದ್ದರಾಮಯ್ಯನವರು ಕೂಡ ಅಭಿವೃದ್ಧಿ ಕಡೆಗಣಿಸಿ ಒಡೆದಾಳುವ ನೀತಿ ಅನುಸರಿಸಿ ಕೇವಲ ಓಟ್ ಬ್ಯಾಂಕ್ ರಾಜಕಾರಣಕ್ಕಿಳಿದುಬಿಟ್ಟರು. ಆದರೆ ಜನ ಇದಾವುದನ್ನೂ ಮರೆಯದೇ ಕಳೆದ ಚುನಾವಣೆಯಲ್ಲಿ ಪಾಠ ಕಲಿಸಿದರು.
ಈಗ ಮತ್ತೆ @siddaramaiahನವರು ಓಡಲೆಂದು ನಮ್ಮ ಸರ್ಕಾರ ರಾಜ್ಯದಲ್ಲಿ ಉತ್ತಮ ರಸ್ತೆಗಳನ್ನು ನಿರ್ಮಿಸುತ್ತಿದೆ. ಆದರೆ ಈಗ ಬನ್ನೂರು-ಮಳವಳ್ಳಿ ಮಾರ್ಗದಲ್ಲಿ ಓಡಲು ಕನಕಪುರದಲ್ಲಿ ಬಂಡೆ ಅಡ್ಡಲಾಗಿದೆ! ಸಿಎಂ ಆಗಿದ್ದಾಗ ನಿದ್ದೆ ಮಾಡಿ, ಈಗ ಚುನಾವಣೆಯೆಂದು ತಟ್ಟನೆ ಎಚ್ಚರಗೊಂಡು ಈ ಭಾಗದ ಬಗ್ಗೆ ಮಾತಾಡುತ್ತಿದ್ದಾರೆ.
7/8
— BJP Karnataka (@BJP4Karnataka) December 28, 2022
2018ರ ಚುನಾವಣೆಯಲ್ಲಿ ಸೋಲು ಖಚಿತ ಎಂದು ಅರಿವಾದಾಗ ಸಿದ್ದರಾಮಯ್ಯನವರು ತಮ್ಮನ್ನು ನಂಬಿದವರನ್ನು ಅನಾಥರನ್ನಾಗಿಸಿ ಬಾದಾಮಿಗೆ ಓಡಿಹೋದರು. ಅಲ್ಲಿಂದ ಮತ್ತೆ ಇಲ್ಲಿಗೆ ಬರುವ ಯೋಚನೆ ಮಾಡುತ್ತಿದ್ದಾರೆ. ಆದರೆ ಒಡೆಯರ್ ಅವರಿಗೆ ಅಗೌರವದ ಏಕವಚನದ ಪದ ಬಳಸಿದವರನ್ನು ಈ ಭಾಗದ ಸುಸಂಸ್ಕೃತ ಜನರು ಶಾಶ್ವತವಾಗಿ ತಿರಸ್ಕರಿಸಿದ್ದಾರೆ.
ಈಗ ಮತ್ತೆ ಸಿದ್ದರಾಮಯ್ಯನವರು ಓಡಲೆಂದು ನಮ್ಮ ಸರ್ಕಾರ ರಾಜ್ಯದಲ್ಲಿ ಉತ್ತಮ ರಸ್ತೆಗಳನ್ನು ನಿರ್ಮಿಸುತ್ತಿದೆ. ಆದರೆ ಈಗ ಬನ್ನೂರು-ಮಳವಳ್ಳಿ ಮಾರ್ಗದಲ್ಲಿ ಓಡಲು ಕನಕಪುರದಲ್ಲಿ ಬಂಡೆ ಅಡ್ಡಲಾಗಿದೆ! ಸಿಎಂ ಆಗಿದ್ದಾಗ ನಿದ್ದೆ ಮಾಡಿ, ಈಗ ಚುನಾವಣೆಯೆಂದು ತಟ್ಟನೆ ಎಚ್ಚರಗೊಂಡು ಈ ಭಾಗದ ಬಗ್ಗೆ ಮಾತಾಡುತ್ತಿದ್ದಾರೆ.