ಬೆಂಗಳೂರು : ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ನಲ್ಲಿ ಉದ್ಘಾಟನೆ ಮಾಡಲಿದ್ದಾರೆ.
ರಾಜ್ಯಾದ್ಯಂತ ಕೆಂಪೇಗೌಡರ ಪ್ರತಿಮೆ ಅಭಿಯಾನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲೂ 45 ದಿನಗಳ ಕಾಲ ಪ್ರತಿಮೆ ಉದ್ಘಾಟನಾ ಅಭಿಯಾನ ನಡೆಯಲಿದೆ. ಥೀಮ್ ಪಾರ್ಕ್ ನಿರ್ಮಾಣಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಿಎಂ ಬೊಮ್ಮಾಯಿ ಸೇರಿ ಸಚಿವರಿಂದ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಥೀಮ್ ಪಾರ್ಕ್ಗೆ ಪ್ರತಿ ಹಳ್ಳಿಯಿಂದ ಮಣ್ಣು ಮತ್ತು ನೀರು ಸಂಗ್ರಹವಾಗಲಿದೆ.
BREAKING NEWS : ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಆ್ಯಂಬುಲೆನ್ಸ್ ಚಲಾಯಿಸಿದ ಚಾಲಕ : 4 ವಾಹನಗಳಿಗೆ ಡಿಕ್ಕಿ
ವಿಮಾನ ನಿಲ್ದಾಣ ಪ್ರವೇಶ ದ್ವಾರದ ಬಳಿ 64 ಕೋಟಿ ರೂ. ವೆಚ್ಚದಲ್ಲಿ 98 ಕೆಜಿ ಕಂಚು, 120 ಕೆಜಿ ಸ್ಟೀಲ್ ಬಳಸಿ ಕೆಂಪೇಗೌಡರ ಪ್ರತಿಮೆ ನಿರ್ಮಾಣವಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಲೆ ಎತ್ತಿರೂ 64 ಕೋಟಿ ರೂ ವೆಚ್ಚದ 108 ಅಡಿಯ ಬೃಹತ್ ಕಂಚಿನ ಪ್ರತಿಮೆ ಅನಾವರಣವಾಗಲಿದೆ. ಹಾಗಾಗಿ ರಾಜ್ಯಾದ್ಯಂತ ನಡೆಯಲಿರುವ ಉದ್ಘಾಟನಾ ಅಭಿಯಾನಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.
ಇಂದು ಬೆಳಗ್ಗೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೃಹತ್ ಎಲ್ಈಡಿ ಸ್ಕ್ರೀನ್ಗಳು ವಾಹನ ಸೇರಿದಂತೆ ಪ್ರತಿಮೆ ಉದ್ಘಾಟನಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.