ಬೆಂಗಳೂರು: ಆರ್ಎಸ್ಎಸ್ ಮತ್ತು ವೀರ ಸಾವರ್ಕರ್ ಕುರಿತು ಮಾತನಾಡುವುದು ಕಾಂಗ್ರೆಸ್ ನಾಯಕರ ದೌರ್ಬಲ್ಯ. ಇದು ಅವರ ಅಜ್ಞಾನವನ್ನು ತಿಳಿಸುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
BIGG NEWS : ಉಜ್ಜಯಿನಿಯಲ್ಲಿ ಶಾಲಾ ವಾಹನಕ್ಕೆ ಟ್ರಕ್ ಡಿಕ್ಕಿ: ನಾಲ್ವರು ವಿದ್ಯಾರ್ಥಿಗಳು ಸಾವು, 10 ಜನರಿಗೆ ಗಾಯ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಬದಲಾಗದೇ ಇದ್ದರೆ ಜನರೇ ಬದಲಿಸುತ್ತಾರೆ, ಕಾಂಗ್ರೆಸ್ ಕಾರ್ಯಕರ್ತರೇ ಅವರ ನಾಯಕರ ಮೇಲೆ ಮುಗಿಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಮಾಜದಲ್ಲಿ ಹೇಗೆ ಇರಬೇಕು ಎಂಬುದನ್ನು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದರೆ ಜನರೇ ಅವರನ್ನು ಬದಲಿಸುತ್ತಾರೆ ಎಂದರು.
ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಸುಧಾಕರ್, ಬಹುಸಂಖ್ಯಾತರು ಕುರಿತು ಕಾಂಗ್ರೆಸ್ ನಾಯಕರು ಲಘುವಾಗಿ ಮಾತನಾಡಿರುವುದು ಕಾರ್ಯಕರ್ತರಿಗೆ ಕೋಪ ತರಿಸಿದೆ. ಭಾವೋದ್ವೇಗಕ್ಕೆ ಒಳಗಾಗಿ ಮೊಟ್ಟೆ ಎಸೆದಿರುವುದು ಖಂಡನೀಯ. ಈ ವಿಚಾರವನ್ನು ಅಲ್ಲಿಯೇ ಬಿಡಬೇಕು. ಆದರೆ, ರಾಜಕಾರಣಕ್ಕಾಗಿ ಮುಂದುವರಿಸಿಕೊಂಡು ಹೋಗುವುದು ಸರಿಯಲ್ಲ ಎಂದು ಹೇಳಿದ್ದಾರೆ.