ವಿಜಯಪುರ : ವಿಜಯಪುರದ ಜ್ಞಾನಯೋಗಾಶ್ರಮಕ್ಕೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದು, ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ವಿಚಾರಿಸಿದ್ದಾರೆ.
BIGG NEWS : ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರ : ಡಾ.ಎಸ್.ಬಿ ಪಾಟೀಲ್ ಮಾಹಿತಿ
ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸಿದ್ದೇಶ್ವರ ಶ್ರೀಗಳು ಒಬ್ಬ ಮಹಾನ್ ಸಂತ, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ನಾನು ವೈದ್ಯರ ಜೊತೆಗೆ ಮಾತನಾಡಿದ್ದೇನೆ. ಅವರೂ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಆದಷ್ಟು ಬೇಗ ಶ್ರೀಗಳು ಗುಣಮುಖರಾಗಲೆಂದು ನಾನು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು.
watch : ಬೆಂಗಳೂರಿನ ಐಕೆಇಎಯಲ್ಲಿ ಶಾಪಿಂಗ್ ಮಾಡುವಾಗ ವ್ಯಕ್ತಿಗೆ ಹೃದಯಾಘಾತ: ಜೀವ ಕಾಪಾಡಿದ ವೈದ್ಯರ video viral
ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಯಾಗುತ್ತಿದೆ. ಸದ್ಯಕ್ಕೆ ಸ್ವಾಮೀಜಿಗಳ ಆರೋಗ್ಯ ಸ್ಥಿರವಾಗಿದೆ ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಡಾ.ಎಸ್.ಬಿ ಪಾಟೀಲ್ ಹೇಳಿದ್ದಾರೆ.