ಬೀದರ್ : ಮಾಜಿ ಸಿಎಂ ಸಿದ್ದರಾಮಯ್ಯ ಭಸ್ಮಾಸುರ ಇದ್ದಂತೆ, ಅವರು ಯಾವ ಪಕ್ಷಕ್ಕೆ ಹೋದರೂ ಆ ಪಕ್ಷವನ್ನು ಮುಳುಗಿಸುತ್ತಾರೆ ಎಂದು ಸಿದ್ದರಾಮಯ್ಯ ವಿರುದ್ಧ ಸಾರಿಗೆ ಸಚಿವ ಬಿ.ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.
BIGG NEWS : ವಿಕಲಚೇತನರಿಗೆ ಸಿಹಿಸುದ್ದಿ : ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಕುರ್ಚಿಗಾಗಿ ಗುದ್ದಾಟ ಶುರುವಾಗಿದೆ. ಸಿದ್ದರಾಮಯ್ಯ ಯಾವ ಪಕ್ಷ ಹೋಗಿದ್ದಾರೆ ಆ ಪಕ್ಷ ಮುಳುಗಿಸಿದ್ದಾರೆ. ಸಿದ್ದರಾಮಯ್ಯ ಭಸ್ಮಾಸುರ ಇದ್ದಹಾಗೆ. ಯಾವ ಪಕ್ಷಕ್ಕೆ ಹೋಗುತ್ತಾರೋ ಆ ಪಕ್ಷ ಭಸ್ಮ ಮಾಡಿಬಿಡುತ್ತಾರೆ ಎಂದು ಹೇಳಿದ್ದಾರೆ.
BIGG NEWS : ವಿಕಲಚೇತನರಿಗೆ ಸಿಹಿಸುದ್ದಿ : ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಸಿದ್ದರಾಮಯ್ಯ ಪಕ್ಷದ ಸಪೋರ್ಟ್ ಮೇಲೆ ಹಾರಾಡುತ್ತಿದ್ದಾರೆ. ವೈಯಕ್ತಿಕ ವರ್ಚಸ್ಸು ಇಲ್ಲ. ಸ್ವಂತ ಸಿದ್ಧಾಂತ, ಶಕ್ತಿ ಇಲ್ಲ ಹಿಂದುಳಿದ ಜಾತಿ ಹೆಸರು ಹೇಳಿ ರಾಜಕೀಯ ಮಾಡುತ್ತಿದ್ದಾರೆ. ಬದಾಮಿಯಲ್ಲಿ ಮತ್ತೆ ಸ್ಪರ್ಧಿಸಿದರೆ ಠೇವಣಿ ಕಳೆದುಕೊಳ್ಳಲಿದ್ದಾರೆ. ಜನರು ನನ್ನ ಸೋಲಿಸಿ ಪಶ್ಚಾತ್ತಾಪ ಪಡುತ್ತಿದ್ದಾರೆ.ಕ್ಷೇತ್ರ ಹುಡುಕಾಟದಲ್ಲಿರುವ ಸಿದ್ದರಾಮಯ್ಯ ಹೇಗೆ ಸಿಎಂ ಆಗುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.