ಬೆಂಗಳೂರು ; ರೌಡಿಶೀಟರ್ ರೌಡಿ ಫೈಟರ್ ರವಿ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದ್ದು, ವಾಂಟೆಂಡ್ ಕ್ರಿಮಿನಲ್ಗಳೆಲ್ಲ ಈಗ ಬಿಜೆಪಿಗೆ ವಾಂಟೆಂಡ್ ಎಂದು ಕಿಡಿಕಾರಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ವಾಂಟೆಂಡ್ ಕ್ರಿಮಿನಲ್ಗಳೆಲ್ಲ ಈಗ ಬಿಜೆಪಿಗೆ ವಾಂಟೆಂಡ್, ರೌಡಿ ಶೀಟರ್ಗಳನ್ನು ಪಕ್ಕದಲ್ಲಿಟ್ಟುಕೊಳ್ಳುವ ಹಾಗೂ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ.ಬಿಜೆಪಿ ಈಗ ಮತ್ತೊಬ್ಬ ರೌಡಿ ಫೈಟರ್ ರವಿ ಎಂಬಾತನನ್ನು ಪಕ್ಷಕ್ಕೆ ಸೇರಿಸಿಕೊಂಡ ಸಂಸ್ಕೃತಿ ಪಾಲನೆಗೆ ಮುಂದಾಗಿದೆ ಎಂದು ಹೇಳಿದೆ.
ವಾಂಟೆಂಡ್ ಕ್ರಿಮಿನಲ್ಗಳೆಲ್ಲ ಈಗ ಬಿಜೆಪಿಗೆ ವಾಂಟೆಂಡ್!
ರೌಡಿ ಶೀಟರ್ಗಳನ್ನು ಪಕ್ಕದಲ್ಲಿಟ್ಟುಕೊಳ್ಳುವ ಹಾಗೂ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ @BJP4Karnataka ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ.
ಬಿಜೆಪಿ ಈಗ ಮತ್ತೊಬ್ಬ ರೌಡಿ ಫೈಟರ್ ರವಿ ಎಂಬಾತನನ್ನು ಪಕ್ಷಕ್ಕೆ ಸೇರಿಸಿಕೊಂಡ ಸಂಸ್ಕೃತಿ ಪಾಲನೆಗೆ ಮುಂದಾಗಿದೆ! pic.twitter.com/aUtfFTrsxN
— Karnataka Congress (@INCKarnataka) November 28, 2022
ಬಿಜೆಪಿಯಲ್ಲಿ ಈ ಮೊದಲು ವೈಟ್ ಕಾಲರ್ ರೌಡಿಗಳಿದ್ದರು, ಈಗ ರಿಯಲ್ ರೌಡಿಗಳು ಸೇರಿದ್ದಾರೆ. ಮುಂದೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕೂಡ ಬಿಜೆಪಿ ಸೇರಿ ಪಾವನನಾಗಬಹುದು! ಪಾತಕಿಗಳು, ದರೋಡೆಕೋರರು, ಡ್ರಗ್ ಪೆಡ್ಲರ್ಗಳು, ಕ್ರೀಮಿನಲ್ಗಳು, ಭ್ರಷ್ಟರು, ರೇಪಿಸ್ಟರು ಎಲ್ಲರಿಗೂ ಬಿಜೆಪಿ ಪಕ್ಷ ತವರು ಮನೆ ಇದ್ದಂತೆ ಎಂದು ಲೇವಡಿ ಮಾಡಿದೆ.
ಬಿಜೆಪಿಯ ಕೃಪಾಕಟಾಕ್ಷದಿಂದ ಸೈಲೆಂಟ್ ಸುನಿಲ್ ಎಂಬ ರೌಡಿಯ ಮುಂದೆ ಈಗ ಪೊಲೀಸರೇ ಸೈಲೆಂಟ್! ಅರಗಜ್ಞಾನೇಂದ್ರ ಅವರೇ, ಸೈಲೆಂಟ್ ಸುನಿಲನಿಗೆ ಪೊಲೀಸರು ಹುಡುಕುತ್ತಿರಲಿಲ್ಲವೇ? ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರೀರಲಿಲ್ಲವೇ? ಬಂಧಿಸದಂತೆ ಪೊಲೀಸರಿಗೆ ತಡೆದವರು ಯಾರು? ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ?
ವಾಂಟೆಡ್ ಲಿಸ್ಟ್ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ, ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ! ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು – ಬಿಜೆಪಿ. ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ ಎಂದು ಪ್ರಶ್ನಿಸಿದೆ.