ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022 ರ ಮೆಗಾ ಹರಾಜು ಫೆಬ್ರವರಿ 12, 13 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎನ್ನಲಾಗಿದ್ದು, ಈ ಬಗ್ಗೆ ಇನ್ನೂ ಬಿಸಿಸಿಐನಿಂದ ಅಧಿಕೃತ ಪ್ರಕಟಣೆಯನ್ನು ನಿರೀಕ್ಷಿಸಲಾಗಿದೆ. ಹೌದು, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022 ರ ಮೆಗಾ ಹರಾಜು ಫೆಬ್ರವರಿ 12, 13 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇನ್ನೂ ಅಧಿಕೃತವಾಗಿ ದಿನಾಂಕಗಳನ್ನು ಪ್ರಕಟಿಸದಿದ್ದರೂ, ಫ್ರಾಂಚೈಸಿ ಮಾಲೀಕರು ಹೇಳಿದ ದಿನಾಂಕಗಳಲ್ಲಿ ಬಿಡ್ಡಿಂಗ್ ವಾರ್ ನಡೆಯಲಿದೆ ಎನ್ನಲಾಗಿದೆ.
ಫೆಬ್ರವರಿ 12 ಮತ್ತು 13 ರಂದು ಹರಾಜು ನಡೆಯುವ ಈ ಎರಡು ದಿನಾಂಕಗಳಂದು ಫ್ರ್ಯಾಂಚೈಸ್ ಮಾಲೀಕರು ಹರಾಜು ದಿನಾಂಕಗಳನ್ನು ನಿಗದಿ ಮಾಡಿ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಮೆಗಾ ಹರಾಜು ನಡೆಯಲಿದ್ದು, ಅಂದೇ ಫೆಬ್ರವರಿ 12 ರಂದು ಕೋಲ್ಕತ್ತಾದಲ್ಲಿ ನಡೆಯಲಿರುವ ODI ಮುಖಾಮುಖಿಯಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ಮುಖಾಮುಖಿಯಾಗಲಿವೆ. ಹರಾಜು ಪ್ರಕ್ರಿಯೆಯಲ್ಲಿ ಪಂದ್ಯ ಯಾವುದೇ ಪರಿಣಾಮ ಬೀರದಂತೆ ನೋಡಿಕೊಳ್ಳಲಾಗುವುದು ಎಂದು ಮಂಡಳಿಯುಹೇಳಿದೆ.
‘ಕೃಷ್ಣ ಮೇಲ್ದಂಡೆ ಯೋಜನೆ’ಯ ಅನುಷ್ಟಾನದ ವಿಳಂಬಕ್ಕೆ ಕಾಂಗ್ರೆಸ್ ಕಾರಣ – ಸಚಿವ ಗೋವಿಂದ ಕಾರಜೋಳ