ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಬಳಿ ಇಂದು ಮಧ್ಯಾಹ್ನ ಬಿಹಾರ ವಿಧಾನಸಭಾ ಚುನಾವಣೆಯ ಅದ್ಭುತ ಗೆಲುವಿನ ಸಂಭ್ರಮಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ, ಶಾಸಕ ಡಾ. ಚಂದ್ರು ಲಮಾಣಿ, ಸಿಮೆಂಟ್ ಮಂಜುನಾಥ್, ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ್, ಮಾಜಿ ಸಂಸದ ಡಾ. ಉಮೇಶ್ ಜಾಧವ್, ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಎಸ್‍ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ಎಸ್‍ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
‘ಇಂದು ಬಿಹಾರ, ನಾಳೆ ಕರ್ನಾಟಕ’ ‘ಭಾರತ್ ಮಾತಾಕೀ ಜೈ’ ‘ನರೇಂದ್ರ ಮೋದಿಜೀ ಕೀ ಜೈ’ ‘ಬಿಜೆಪಿಗೆ ಜಯವಾಗಲಿ’ –ಇವೇ ಮೊದಲಾದ ಘೋಷಣೆಗಳನ್ನು ಕೂಗಲಾಯಿತು. ಕಾರ್ಯಕರ್ತರು ಎಲ್ಲಿ ನೋಡು ಅಲ್ಲಿ ನೋಡು ಬಿಜೆಪಿ ಎಂಬ ಘೋಷಣೆ ಕೂಗುತ್ತ, ಧ್ವಜ ಬೀಸುತ್ತ ನೃತ್ಯ ಮಾಡಿದರು. ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಲಾಯಿತು.








