ಬಿಹಾರ: ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಪಾಟ್ನಾದ ಖಾಸಗಿ ಆಸ್ಪತ್ರೆಯಲ್ಲಿ ಭೇಟಿಯಾದರು. ಲಾಲು ಅವರು ಭುಜದ ಮೂಳೆ ಮುರಿತಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಧ್ಯಾಹ್ನ 1 ಗಂಟೆ ಸುಮಾರಿಗೆ ಪಾರಸ್ ಆಸ್ಪತ್ರೆಗೆ ಆಗಮಿಸಿದ ನಿತೀಶ್ ಅವರು ಐಸಿಯುನಲ್ಲಿ ಲಾಲು ಅವರನ್ನು ಭೇಟಿಯಾದರು. ನಿತೀಶ್ ಜೊತೆಗೆ ರಾಜ್ಯದ ಆರೋಗ್ಯ ಸಚಿವ ಮಂಗಲ್ ಪಾಂಡೆ ಮತ್ತು ಕೈಗಾರಿಕಾ ಸಚಿವ ಶಹನವಾಜ್ ಹುಸೇನ್ ಕೂಡ ಲಾಲು ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಭಾನುವಾರ ಲಾಲು ಅವರು ತಮ್ಮ ಮನೆಯಲ್ಲಿ ಬಿದ್ದು ಬಲ ಭುಜದ ಮೂಳೆ ಮುರಿದಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭಾನುವಾರದ ಘಟನೆಯ ನಂತರ ಲಾಲು ಅವರನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದೇ ದಿನ ಅವರನ್ನು ಡಿಸ್ಚಾರ್ಜ್ ಮಾಡಲಾಯಿತು. ಆದರೆ ಸೋಮವಾರ ಅವರ ಸ್ಥಿತಿ ಗಂಭೀರವಾದ ಪರಿಣಾಮ ಅವರನ್ನು ಪಾರಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.