BIG BREAKING : ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ – Kannada News Now


State

BIG BREAKING : ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ

ನವದೆಹಲಿ : ಬಿಹಾರ ವಿಧಾನಸಭೆಯ 243 ಕ್ಷೇತ್ರಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಮತದಾನದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಚುನಾವಣಾ ಆಯುಕ್ತ ಸುನಿಲ್ ಅರೋರಾ ಹೇಳಿದ್ದಾರೆ.

ಇಂದು ಬಿಹಾರ ವಿಧಾನಸಭೆ ಚುನಾವಣೆ ಘೋಷಣೆಗಾಗಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುನಿಲ್ ಅರೋರಾ,  ಅಕ್ಟೋಬರ್ 28 ರಂದು ಬಿಹಾರ್ ವಿಧಾನಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ. ಕೊರೊನಾ ಮಾರ್ಗಸೂಚಿ ಪಾಲಿಸುವುದಕ್ಕಾಗಿ ನೋಡಲ್ ಹೆಲ್ತ್ ಆಫೀಸರ್ ಗಳನ್ನು ನೇಮಕ ಮಾಡಲಾಗುತ್ತಿದೆ. ಪ್ರತಿ ಮತಗಟ್ಟೆಯಲ್ಲಿ 1,500 ಮತದಾರರ ಬದಲು 1,000 ಮತದಾರರನ್ನಷ್ಟೇ ಮತಚಲಾಯಿಸಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದರು.

243 ಕ್ಷೇತ್ರಗಳ ಪೈಕಿ 38 ಸ್ಥಾನಗಳು ಎಸ್ ಸಿಗಳಿಗೆ ಎರಡು ಸ್ಥಾನ ಎಸ್ ಟಿ ಮೀಸಲಾಗಿದೆ. ಮತದಾನ ಬೆಳಗ್ಗ 7 ರಿಂದ ಸಂಜೆ 6 ಗಂಟೆಯವರೆಗೆ  ನಡೆಯಲಿದ್ದು, ಕೊರನಾ ಸೋಂಕಿರೂ ಮತದಾನ ಚಲಾಯಿಸಬಹುದು. ಮನೆ ಮನೆ ಪ್ರಚಾರಕ್ಕೆ ಐವರಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಮೂರು ಹಂತಗಳಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೊದಲ ಹಂತದಲ್ಲಿ 71, 2 ನೇ ಹಂತದಲ್ಲಿ 94 ಮತ್ತು ಮೂರನೇ ಹಂತದಲ್ಲಿ 71 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.  ಅ.28 ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ನವೆಂಬರ್ 3 ರಂದು ಎರಡನೇ ಹಂತದ ಮತದಾನ ಮತ್ತು ನವೆಂಬರ್ 7 ರಂದು ಮೂರನೇ ಹಂತದ ಮತದಾನ ನಡೆಯಲಿದ್ದು, ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು.




error: Content is protected !!