ಬಿಹಾರ : ಕಿರುಕುಳಕ್ಕೆ ಹೆದರಿ ಮಹಿಳೆಯೊಬ್ಬರು ಚಲಿಸುತ್ತಿದ್ದ ಬಸ್ಸಿನ ಕಿಟಕಿಯಿಂದ ಜಿಗಿದಿದ್ದು,ಪರಿಣಾಮ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಿಹಾರದ ಪುರ್ನಿಯಾದಲ್ಲಿ ನಡೆದಿದೆ.
ಗಾಯಗೊಳಗಾದ ಮಹಿಳೆಯನ್ನು ಶಿಕ್ಷಕಿ ವೈಶಾಲಿ (30) ಎಂದು ಗುರುತಿಸಲಾಗಿದ್ದು, ಇವರು ಪಶ್ಚಿಮ ಬಂಗಾಳದ ಸಿಲಿಗುರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಆ ಸಮಯದಲ್ಲಿದಲ್ಖೋಲಾ ಚೆಕ್ ಪೋಸ್ಟ್ ಮೊದಲು ನಾಲ್ವರು ಪುರುಷರು ಬಸ್ ಹತ್ತಿದ್ದರು.
ಅವರ ವರ್ತನೆಯ ಬಗ್ಗೆ ಮಹಿಳೆ ಭಯಗೊಂಡು ಕಿರುಕುಳದ ಭಯದಿಂದ ಆಕೆ ಚಲಿಸುತ್ತಿದ್ದ ಬಸ್ಸಿನ ಕಿಟಕಿಯಿಂದ ಹೊರಗೆ ಹಾರಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಸಿ ಪೊಲೀಸ್ ಠಾಣೆಯಲ್ಲಿ ಹಿಜ್ಲಾ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಹಿಳೆ ಪತ್ತೆಯಾಗಿದ್ದು, ಪೊಲೀಸ್ ಗಸ್ತು ತಂಡವು ಶಿಕ್ಷಕಿಯನ್ನು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಮಹಿಳೆಯ ಸ್ಥಿತಿ ಚಿಂತಾಜನಕವಾಗಿದ್ದು, ಉತ್ತಮ ಚಿಕಿತ್ಸೆಗಾಗಿ ಸಿಲಿಗುರಿಗೆ ಕಳುಹಿಸಲಾಗಿದೆ. ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿದ್ದು, ಕೈ ಮುರಿದಿದೆ ಎಂದು ತಿಳಿದು ಬಂದಿದೆ.
BIGG NEWS : P.M ಕಿಸಾನ್ ಯೋಜನೆಗೆ ಇ-ಕೆವೈಸಿ ಮಾಡುವ ಕುರಿತು ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ
BIGG NEWS : ಬೆಂಗಳೂರಿನ ‘ಆರ್ಕಿಡ್ ಇಂಟರ್ ನ್ಯಾಷನಲ್’ ಶಾಲೆ ವಿರುದ್ಧ ‘FIR’ ದಾಖಲು, ಕಪ್ಪುಪಟ್ಟಿಗೆ ಸೇರಿಸಲು ಚಿಂತನೆ