ರಾಂಚಿ: ಬಿಹಾರದ ಛಾಪ್ರಾ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಹಲವರು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಮದ್ಯ ಸೇವಿಸಿದ ನಂತರ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಜನರು ಸಹ ತಮ್ಮ ದೃಷ್ಟಿಯನ್ನು ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಘಟನೆಯ ನಂತರ, ಸರಣ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ಅಧೀಕ್ಷಕರು ಸಂತ್ರಸ್ತರನ್ನು ಸದರ್ ಆಸ್ಪತ್ರೆಯಲ್ಲಿ ಭೇಟಿಯಾಗಿ ಘಟನೆಯ ಬಗ್ಗೆ ಅಧಿಕಾರಿಗಳು ಗ್ರಾಮಸ್ಥರು ಮತ್ತು ಕುಟುಂಬಗಳಿಂದ ಮಾಹಿತಿಯನ್ನು ಸಂಗ್ರಹಿಸಿದ್ದಾರೆ ಎನ್ನಲಾಗಿದೆ.
ಆರೋಗ್ಯದಲ್ಲಿ ಏರುಪೇರು ಉಂಟಾಗಿರುವವರನ್ನು ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಪಿಎಂಸಿಎಚ್) ಔಷಧಿ ಪಡೆಯುತ್ತಿದ್ದಾರೆ ಮತ್ತು ಸಾವಿನ ಕಾರಣವನ್ನು ಕಂಡುಹಿಡಿಯಲು ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಯ ತಂಡವನ್ನು ಗ್ರಾಮಕ್ಕೆ ಕಳುಹಿಸಲಾಗಿದೆ” ಎಂದು ಸರನ್ ಡಿಎಂ ರಾಜೇಶ್ ಮೀನಾ ತಿಳಿಸಿದ್ದಾರೆ.