ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದೆ. ಇಂದು ಬೆಳ್ಳಂಬೆಳಗ್ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.
ಮುಂದೆ ಹೋಗುತ್ತಿದ್ದ ಬೈಕ್ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ. ನೆಲಕ್ಕೆ ಬಿದ್ದ ಯುವಕನ ತಲೆಗೆ ಗಂಭೀರ ಗಾಯವಾಗಿ ರಕ್ತಸ್ರಾವವಾಗಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆಯಿಂದ ಆಕ್ರೋಶಗೊಂಡ ಸಾರ್ವಜನಿಕರು ಅಪಘಾತಕ್ಕೆ ಕಾರಣವಾದ ಬಸ್ ಚಾಲಕನಿಗೆ ಥಳಿಸಿದ್ದಾರೆ. .ಮೃತ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗೆ ಕೆ.ಸಿ.ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಕಾಮಾಕ್ಷಿಪಳ್ಯ ಠಾಣೆ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.