ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ತಲೆ ಮರೆಸಿಕೊಂಡಿದ್ದರು. ಅವರ ಬಂಧನಕ್ಕಾಗಿ ಇದೀಗ ಸಿಐಡಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ.
ನಿನ್ನೆಯಷ್ಟೇ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಭೈರತಿ ಬಸವರಾಜ್ ಗೆ ಬಂಧನದ ಭೀತಿ ಎದುರಾಗಿತ್ತು.
ಮತ್ತೊಂದೆಡೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಬಂಧನಕ್ಕಾಗಿ ಸಿಐಡಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ ಎನ್ನಲಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಹಿನ್ನಲೆಯಲ್ಲಿ ಅವರು ಬಂಧನದ ಭೀತಿಯಿಂದ ವಿದೇಶಕ್ಕೆ ತೆರಳುವ ಸಾಧ್ಯತೆ ಹಿನ್ನಲೆಯಲ್ಲಿ, ಈ ಕ್ರಮವನ್ನು ಕೈಗೊಂಡಿದ್ದಾರೆ ಎನ್ನಲಾಗಿದೆ.








