ಬೆಂಗಳೂರು: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ಅಂಕಿತ ಹಾಕದೇ, ವಿಧಾನಮಂಡಲದ ಅಧಿವೇಶನ ಘೋಷಣೆಯಾದ ಕಾರಣ, ವಾಪಾಸ್ ಕಳುಹಿಸಿದ್ದಾರೆ. ಇಂತಹ ಮಸೂದೆಯನ್ನು ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲಾಗುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಅವರು ಇಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಕನ್ನಡ ಬಳಕೆ ಕಡ್ಡಾಯ ಸುಗ್ರೀವಾಜ್ಞೆ
ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಬಳಕೆ ಕಡ್ಡಾಯ ಮಾಡಲು ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲು ವಾವಸ್ಸು ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕನ್ನಡ ಬಳಕೆ ಕಡ್ಡಾಯದ ಬಗ್ಗೆ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ಮಾನ್ಯ ರಾಜ್ಯಪಾಲರಿಗೆ ಕಳಿಸಲಾಗಿತ್ತು. ಆದರೆ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುವ ಮುಂಚೆಯೇ ಅಧಿವೇಶನ ಪ್ರಾರಂಭವಾದ ಕಾರಣ ವಾಪಸ್ಸು ಕಳಿಸಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗುವುದು ಎಂದರು.
BREAKING: ‘ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ’ರಾಗಿ ಬಿಸಿಸಿಐ ಕಾರ್ಯದರ್ಶಿ ‘ಜಯ್ ಶಾ’ ಮರು ನೇಮಕ
‘ಗ್ಯಾರಂಟಿ ಯೋಜನೆ’ಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ