ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಆಧಾರ್ ಸಹಿತ ಬಯೋಮೆಟ್ರೀಕ್ ಹಾಜರಾತಿ ಕಡ್ಡಾಯಗೊಳಿಸಲಾಗಿದೆ.
ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಕೇಂದ್ರ ಕಚೇರಿ, ಆರು ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿ ಹಾಗೂ ಎಲ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಆಧಾರ್ಸಹಿತ ಬಯೋಮೆಟ್ರಿಕ್ ಹಾಜರಾತಿ ಜಾರಿಗೊಳಿಸಲಾಗುತ್ತಿದೆ.
ವೈಯಕ್ತಿಕ ವಿವರಗಳನ್ನು ಇಲಾಖೆ ಪೋರ್ಟಲ್ನಲ್ಲಿ 30ರೊಳಗೆ ನೋಂದಣಿ ಮಾಡಿಕೊಳ್ಳುವಂತೆ ಆಯುಕ್ತರು ಆದೇಶ ಹೊರಡಿಸಿದ್ದು,ಮೊಬೈಲ್ ಆ್ಯಪ್ಗಳನ್ನು ತಮ್ಮ ಮೊಬೈಲ್ಗಳಲ್ಲಿ ಇನ್ಸ್ಟಾಲ್ ಮಾಡಿಕೊಂಡು ಕಡ್ಡಾಯವಾಗಿ ಹಾಜರಾತಿ ದಾಖಲಿಸಬೇಕು ಎಂದು ಸೂಚನೆ ನೀಡಲಾಗಿದೆ.








