ನವದೆಹಲಿ : ತಮಿಳುನಾಡಿನ ಕೊನೂರಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಗಾಯಗೊಂಡ ಭಾರತೀಯ ಸೇನಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ನಿಧನರಾಗಿದ್ದಾರೆ.
ಘಟನೆ ಹಿನ್ನೆಲೆ ಭದ್ರತಾ ಪಡೆಗಳಿಗೆ ಸಂಬಂಧಿಸಿದ ಕೇಂದ್ರ ಸಂಪುಟ ಸಮಿತಿಯು ನವದೆಹಲಿಯಲ್ಲಿ ಚರ್ಚೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಭಾರತದ ಭದ್ರತಾ ಪಡೆಗಳ ಉನ್ನತ ಮಟ್ಟದ ನೇಮಕಾತಿಗಳ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ, ಜನರಲ್ ರಾವತ್ ನಿಧನದ ನೋವಿನ ಸಂದರ್ಭದಲ್ಲಿ ಭಾರತೀಯ ಸೇನೆಗೆ ತಕ್ಷಣವೇ ಮತ್ತೊಬ್ಬ ಯೋಗ್ಯ ಅಧಿಕಾರಿಯನ್ನು ಸೇನಾ ಮಖ್ಯಸ್ಥರಾಗಿ ನೇಮಿಸುವ ಸವಾಲು ಕೇಂದ್ರ ಸರ್ಕಾರದ ಮುಂದಿದ್ದು, ಈ ಹಿನ್ನೆಲೆ ಸಂಪುಟ ಸಮಿತಿ ಸಭೆ ಮಹತ್ವ ಪಡೆದುಕೊಂಡಿದೆ.
2016 ರ ಸರ್ಜಿಕಲ್ ಸ್ಟ್ರೈಕ್ ಮತ್ತು ಹೆಚ್ಚಿನ ಕಾರ್ಯಾಚರಣೆಗಳನ್ನು ಸಂಘಟಿಸಿದ ಜನರಲ್ ಬಿಪಿನ್ ಲಕ್ಷ್ಮಣ್ ಸಿಂಗ್ ರಾವತ್, ( PVSM, UYSM, AVSM, YSM, SM, VSM, ADC) ಅವರು ಬುಧವಾರ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾಗಿದ್ದಾರೆ.
ಮ್ಯಾನ್ಮಾರ್ ಪೂರ್ವದಲ್ಲಿನ ಗಡಿಯುದ್ದಕ್ಕೂ ಇದ್ದ ಅಲ್ಲಿನ ಉಗ್ರಗಾಮಿ ಶಿಬಿರಗಳ ಮೇಲೆ ದಾಳಿ ನಡೆಸಲು ಮಾಸ್ಟರ್ ಮೈಂಡ್ ಆಗಿ CDS ಜನರಲ್ ಬಿಪಿನ್ ರಾವತ್ ಕೆಲಸ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಅಧ್ಯಕ್ಷತೆ ವಹಿಸಿದ್ದು, ಘಟನೆ ಸಂಬಂಧ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೊಯಮತ್ತೂರು ವಿಮಾನ ನಿಲ್ದಾಣ ತಲುಪಿದ್ದಾರೆ. ರಸ್ತೆ ಮಾರ್ಗವಾಗಿ ಕುನ್ನೂರಿಗೆ ತೆರಳಲಿದ್ದಾರೆ. ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿಯ ಕುಟುಂಬಕ್ಕೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. , ಈ ಸಂಕಷ್ಟದ ಸಮಯದಲ್ಲಿ ಅವರ ಕುಟುಂಬದ ಜೊತೆಗೆ ಇದ್ದೇವೆ ಅಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಜನರಲ್ ಬಿಪಿನ್ ರಾವತ್ ಒಬ್ಬ ಅತ್ಯುತ್ತಮ ಸೈನಿಕ. ನಿಜವಾದ ದೇಶಭಕ್ತ, ಅವರು ನಮ್ಮ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಉಪಕರಣಗಳನ್ನು ಆಧುನೀಕರಿಸುವಲ್ಲಿ ಮಹತ್ತರವಾಗಿ ಕೊಡುಗೆ ನೀಡಿದ್ದಾರೆ. ಕಾರ್ಯತಂತ್ರದ ವಿಷಯಗಳ ಬಗ್ಗೆ ಅವರ ಒಳನೋಟಗಳು ಮತ್ತು ದೃಷ್ಟಿಕೋನಗಳು ಅಸಾಧಾರಣವಾಗಿವೆ. ಅವರ ಅಗಲಿಕೆ ನನಗೆ ಅತೀವ ದುಃಖ ತಂದಿದೆ. ಓಂ ಶಾಂತಿ. ಅಂತ ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ ಮಾಡಿ ಕಂಬನಿ ಮಿಡಿದಿದ್ದಾರೆ.