ಬೆಂಗಳೂರು: ರಾಜ್ಯದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯಾಧ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದ್ದು, ಅವುಗಳನ್ನು ಪಾಲಿಸುವಂತೆ ತಿಳಿಸಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಯಾವುದೇ ಕಾರಣಕ್ಕೂ ಹಸಿ ಮಾಂಸ ತಿನ್ನದಂತೆ ಸಲಹೆ ಮಾಡಿದೆ. ಮಾಂಸವನ್ನು ಚೆನ್ನಾಗಿ ಬೇಯಿಸಿಯೇ ತಿನ್ನುವಂತೆ ಸೂಚಿಸಿದೆ.
ಇನ್ನೂ ಹಕ್ಕಿ ಜ್ವರ ಕಾಣಿಸಿಕೊಂಡ ಪ್ರದೇಶದಲ್ಲಿ ಮಾಂಸ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾರೂ ಓಡಾಡುವಂತಿಲ್ಲ ಎಂಬುದಾಗಿ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಹಕ್ಕೆ ಜ್ವರ ಬಂದರೇ 10 ಕಿಲೋಮೀಟರ್ ವ್ಯಾಪ್ತಿಯನ್ನು ಸರ್ವೆಲೆನ್ಸ್ ಪ್ರದೇಶ ಎಂಬುದಾಗಿ ಗುರುತಿಸಲಾಗುತ್ತದೆ. ಈ ಪ್ರದೇಶದಲ್ಲಿ ಸಾರ್ವಜನಿಕರ ಓಡಾಡಕ್ಕೆ ನಿಷೇಧ ಹೇರಲಾಗಿದೆ.
BREAKING NEWS: ಅಯೋಧ್ಯೆ ರಾಮ ಮಂದಿರದ ಮೇಲೆ ದಾಳಿಗೆ ಉಗ್ರರ ಸಂಚು: ಓರ್ವ ಶಂಕಿತ ಭಯೋತ್ಪಾದಕ ಅರೆಸ್ಟ್
BREAKING : ಪತ್ನಿಯ ಕಾಟಕ್ಕೆ ಮತ್ತೊಂದು ಬಲಿ : ಕಲಬುರ್ಗಿಯಲ್ಲಿ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ ಶರಣು!