ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದಂತ ಬಿಟ್ ಕಾಯಿನ್ ಕೇಸ್ ತನಿಖೆಯನ್ನು ಸಿಐಡಿ ಪೊಲೀಸರು ನಡೆಸುತ್ತಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ ಆಲಿಯಾಸ್ ಶ್ರೀಕೃಷ್ಣನ ವಿರುದ್ಧ ಸಿಐಡಿ ಕೋಕಾ ಕಾಯ್ದೆಯಡಿ ಕೇಸ್ ದಾಖಲಿಸಿ, ತನಿಖೆ ಚುರುಕುಗೊಳಿಸಿದೆ.
ಈ ಬಗ್ಗೆ ಅಪರಾಧ ತನಿಖಾ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ತುಮಕೂರು ಜಿಲ್ಲೆಯ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಕ್ರಿಸ್ಟೋಕರೆನ್ಸಿ ವಂಚನೆಗೆ ಸಂಬಂಧಿಸಿದಂತೆ ಮೊ.ಸಂ.85/2017 ಕಲಂ.66, 66, 66ಡಿ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕ್ರಿಸ್ಟೋಕರೆನ್ಸಿಗೆ ಸಂಬಂಧಿಸಿದಂತೆ ಸಮಗ್ರ ಹಾಗೂ ವಿಸ್ತ್ರತ ತನಿಖೆ ನಡೆಸಲು ಸಿ.ಐ.ಡಿ ಘಟಕದಲ್ಲಿ ಈಗಾಗಲೇ ವಿಶೇಷ ತನಿಖಾ ತಂಡವನ್ನು ರಚಿಸಲಾಗಿರುವುದರಿಂದ ಈ ಪ್ರಕರಣವನ್ನೂ ಸಹ ಸಿ.ಐ.ಡಿ ಯ ಎಸ್.ಐ.ಟಿ ಗೆ ವರ್ಗಾಯಿಸಲಾಗಿರುತ್ತದೆ ಎಂದಿದೆ.
ಈ ಪ್ರಕರಣದ ಪ್ರಮುಖ ಆರೋಪಿಗಳಾದ ಶ್ರೀಕೃಷ್ಣ ರಮೇಶ್ @ ಶ್ರೀಕಿ ಮತ್ತು ರಾಬಿನ್ ಖಂಡೇನ್‌ವಾಲ ರವರುಗಳು ಇಂತಹ ಹಲವು ಪ್ರಕರಣಗಳಲ್ಲಿ ಆರೋಪಿಗಳಾಗಿ ಭಾಗಿಯಾಗಿರುವುದರಿಂದ ಶ್ರೀಕೃಷ್ಣ ರಮೇಶ್ @ ಶ್ರೀಕಿ ಮತ್ತು ರಾಬಿನ್ ಖಂಡೇನ್‌ವಾಲ ರವರುಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ ಕಾಯ್ದೆ) ಕಲಂ-3 ನ್ನು ಅಳವಡಿಸಿಕೊಂಡು, ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
BREAKING: ಹಿರಿಯ ಪತ್ರಕರ್ತ, ಸಾಮಾಜಿಕ ಹೋರಾಟಗಾರ ಆರ್.ಜಯಕುಮಾರ್ ವಿಧಿವಶ
ರಾಹುಲ್ ದ್ರಾವೀಡ್ ಬದಲಿಗೆ ʻಟೀಂ ಇಂಡಿಯಾʼದ ನೂತನ ಕೋಚ್ ಆಗಿ ʻಗೌತಮ್ ಗಂಭೀರ್ʼ ಆಸಕ್ತಿ : ವರದಿ