ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ವೇಳೆಯಲ್ಲಿ ನಡೆದಂತ ಗಲಭೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬುದಾಗಿ ಬಿಜೆಪಿ ಗಂಭೀರ ಆರೋಪ ಮಾಡಿದೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಬಿಜೆಪಿಯು, ಕಾಂಗ್ರೆಸ್ ಸರ್ಕಾರದ ತುಷ್ಠೀಕರಣದ ನೀತಿಯಿಂದಾಗಿಯೇ ನಾಗಮಂಗಲದಲ್ಲಿ ಗಲಭೆಯಾಗಿದೆ ಎಂದು ಬಿಜೆಪಿಯ ಸತ್ಯಶೋಧನಾ ಸಮಿತಿ ವರದಿ ನೀಡಿದೆ ಎಂದಿದೆ.
ಈ ಗಲಭೆ ಪೂರ್ವನಿಯೋಜಿತವಾಗಿದ್ದು, ಹಿಂದೂ ಸಮುದಾಯದ ಅಂಗಡಿಗಳಿಗೆ ಮಾತ್ರ ಬೆಂಕಿ ಹಚ್ಚಲಾಗಿದೆ. ಕಳೆದ ವರ್ಷವೂ ಇದೇ ರೀತಿ ಗಲಭೆ ನಡೆದಿದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸಿ, ಗಣೇಶ ಮೂರ್ತಿಯ ವಿಸರ್ಜನೆಗೆ ವಿಘ್ನ ತರಲು ಮುಂದೆ ನಿಂತು ಸಹಕಾರ ನೀಡಿದೆ ಎಂಬುದಾಗಿ ಆರೋಪಿಸಿದೆ.
ಹಿಂದೂ ಸಮುದಾಯ ಅಭದ್ರವಾಗಿದ್ದಷ್ಟೂ ತನಗೆ ಲಾಭ ಎಂದು ಅರಿತುಕೊಂಡಿರುವ ಕಾಂಗ್ರೆಸ್ ಸರ್ಕಾರ ಪದೇ ಪದೇ ಹಿಂದೂ ಸಮುದಾಯವನ್ನು ಅವಮಾನಿಸುತ್ತಿದೆ ಎಂಬುದಾಗಿ ಕಿಡಿಕಾರಿದೆ.
ಕಾಂಗ್ರೆಸ್ ಸರ್ಕಾರದ ತುಷ್ಠೀಕರಣದ ನೀತಿಯಿಂದಾಗಿಯೇ ನಾಗಮಂಗಲದಲ್ಲಿ ಗಲಭೆಯಾಗಿದೆ ಎಂದು ಬಿಜೆಪಿಯ ಸತ್ಯಶೋಧನಾ ಸಮಿತಿ ವರದಿ ನೀಡಿದೆ.
ಈ ಗಲಭೆ ಪೂರ್ವನಿಯೋಜಿತವಾಗಿದ್ದು, ಹಿಂದೂ ಸಮುದಾಯದ ಅಂಗಡಿಗಳಿಗೆ ಮಾತ್ರ ಬೆಂಕಿ ಹಚ್ಚಲಾಗಿದೆ.
ಕಳೆದ ವರ್ಷವೂ ಇದೇ ರೀತಿ ಗಲಭೆ ನಡೆದಿದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸಿ, ಗಣೇಶ ಮೂರ್ತಿಯ ವಿಸರ್ಜನೆಗೆ… pic.twitter.com/xxPzL0Wonb
— BJP Karnataka (@BJP4Karnataka) September 21, 2024
BREAKING: ರಾಜ್ಯದ ‘ಎಲ್ಲಾ ದೇವಾಲಯ’ಗಳ ‘ಪ್ರಸಾದ ಪರೀಕ್ಷೆ’ ಮಾಡಲು ತೀರ್ಮಾನ: ಸಚಿವ ರಾಮಲಿಂಗಾ ರೆಡ್ಡಿ
ಬೆಂಗಳೂರಲ್ಲಿ ಹೆಚ್ಚಿದ ‘ನಿಫಾ’ ಭೀತಿ : ಓರ್ವ ವ್ಯಕ್ತಿಗೆ ಸೊಂಕಿನ ಗುಣಲಕ್ಷಣ ಪತ್ತೆ, 41 ಜನರಿಗೆ ‘ಹೋಮ್ ಕ್ವಾರಂಟೈನ್’!