ಕೊಡಗು: ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಸಾವನ್ನಪ್ಪಿದಂತ ಕಾರ್ಯಕರ್ತನ ಕುಟುಂಬಕ್ಕೆ ಬಿಜೆಪಿ ಪಕ್ಷದಿಂದ 10 ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಬಿಜೆಪಿಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ಧಾಪುರದ ಬಳಿಯಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಕಾರ್ಯಕರ್ತ ರಾಮಪ್ಪ ಎಂಬುವರು ಸಾವನ್ನಪ್ಪಿದ್ದಾರೆ. ಅಲ್ಲದೇ ಚಂದ್ರರಾಜು, ರತೀಶ್ ಎಂಬುವರು ಗಾಯಗೊಂಡಿದ್ದಾರೆ ಎಂದಿದ್ದಾರೆ.
ಮೃತ ಬಿಜೆಪಿ ಕಾರ್ಯಕರ್ತ ರಾಮಪ್ಪ ಅವರ ಕುಟುಂಬಕ್ಕೆ 10 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ. ಗಾಯಾಳುಗಳಾದಂತ ಚಂದ್ರರಾಜು, ರತೀಶ್ ಅವರಿಗೆ ತಲಾ 2 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ ಎಂದಿದೆ.
ನಾಳೆ ಮೃತ ರಾಮಪ್ಪ ಅವರ ಕುಟುಂಬವನ್ನು ಭೇಟಿ ಮಾಡಲಿರುವಂತ ಬಿಜೆಪಿ ನಾಯಕರು, ಪರಿಹಾರದ ಚೆಕ್ ವಿತರಣೆ ಮಾಡಲಿದ್ದಾರೆ. ಅಲ್ಲಗೇ ಗಾಯಾಳುಗಳಿಗೂ ಅಂದೇ ಪರಿಹಾರದ ಚೆಕ್ ವಿತರಣೆ ಮಾಡಲಾಗುತ್ತಿದೆ ಎಂಬುದಾಗಿ ಮಾಹಿತಿ ನೀಡಿದೆ.
BREAKING : ಮಾಜಿ ಸಿಎಂ HD ಕುಮಾರಸ್ವಾಮಿಗೆ ಬಿಗ್ ರಿಲೀಫ್ : ರಾಜ್ಯ ಮಹಿಳಾ ಆಯೋಗದ ನೋಟಿಸ್ ಗೆ ಹೈಕೋರ್ಟ್ ತಡೆ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿದೆ; ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿ ಹುನ್ನಾರ: ಡಿಸಿಎಂ ಡಿ.ಕೆ.ಶಿವಕುಮಾರ್