Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ CM ಬದಲಾವಣೆ ಇಲ್ಲ, ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರೆ : ಯತೀಂದ್ರ ಸಿದ್ದರಾಮಯ್ಯ

28/06/2025 2:08 PM

BREAKING : ಸೆ.22ಕ್ಕೆ ಮೈಸೂರು ದಸರಾಗೆ ಚಾಲನೆ, ಅ.2 ರಂದು ಜಂಬೂ ಸವಾರಿ : ಸಿಎಂ ಸಿದ್ದರಾಮಯ್ಯ ಹೇಳಿಕೆ

28/06/2025 1:50 PM

ಪಾಕಿಸ್ತಾನದಲ್ಲಿ ಭೀಕರ ಪ್ರವಾಹ: ಹಲವರು ಸಾವು, ಪ್ರವಾಹದಲ್ಲಿ ಕೊಚ್ಚಿಹೋದ ಕುಟುಂಬ

28/06/2025 1:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜಕಾರಣಕ್ಕಾಗಿ ಬಿಜೆಪಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
KARNATAKA

ರಾಜಕಾರಣಕ್ಕಾಗಿ ಬಿಜೆಪಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

By kannadanewsnow0724/02/2024 6:55 PM

ಅರಸಿಕೇರೆ/ಹಾಸನ:ಬಿಜೆಪಿಯವರು ಕೇಂದ್ರ ಸರ್ಕಾರದ ಅನ್ಯಾಯವನ್ನು ಸಮರ್ಥನೆ ಮಾಡಿಕೊಂಡು ಪಕ್ಷ ರಾಜಕಾರಣಕ್ಕಾಗಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದರೊಂದಿಗೆ ಮಾತನಾಡಿದರು.

ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆಯಲ್ಲಿ ಆಂಧ್ರ ಪ್ರದೇಶ, ತಮಿಳುನಾಡಿಗೆ ತೊಂದರೆ ಇಲ್ಲ. ನಮ್ಮ ಸರ್ಕಾರಕ್ಕೆ ಮಾತ್ರ ಯಾಕೆ ತೊಂದರೆ, ಅಪಪ್ರಚಾರ ಮಾಡುತ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಉತ್ತರಿಸಿ ಕೇರಳದವರು ಯಾಕೆ ದೆಹಲಿಗೆ ಬಂದು ಪ್ರತಿಭಟಿಸಿದರು ಅದಕ್ಕೆ ತಮಿಳುನಾಡಿನವರು ಏಕೆ ಬೆಂಬಲ ನೀಡಿದರು ಎಂದು ಪ್ರಶ್ನಿಸಿ ಎಲ್ಲಾ ರಾಜ್ಯಗಳಿಗೂ ಅನ್ಯಾಯವಾಗಿದೆ. ದಕ್ಷಿಣ ರಾಜ್ಯಗಳಿಗೆ ಜಾಸ್ತಿ ಅನ್ಯಾಯವಾಗಿದೆ. ಉತ್ತರದ ರಾಜ್ಯಗಳಿಗೆ ಕೊಡಬೇಡಿ ಎನ್ನುವುದಿಲ್ಲ. ಆದರೆ ನಮಗೆ ಅನ್ಯಾಯ ಮಾಡಬೇಡಿ. ಕೇಂದ್ರದ ಪಾಲಿನಲ್ಲಿಯೇ ಕೊಡಲಿ. ನಮ್ಮ ಪಾಲಿನಿಂದ ಯಾಕೆ ಕಿತ್ತುಕೊಡುತ್ತಾರೆ ಎಂದರು. 100 ರೂ ತೆರಿಗೆ ಸಂಗ್ರಹ ಮಾಡಿ ಕೊಟ್ಟರೆ 13 ರೂ. ಮಾತ್ರ ಕೊಡುತ್ತಾರೆ ಇದು ನ್ಯಾಯವೇ? ಎಂದರು.

ಉದ್ದೇಶಪೂರ್ವಕವಾಗಿ ಅಪಪ್ರಚಾರ : 
ವಿಧಾನ ಪರಿಷತ್ ನಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆಗೆ ಸೋಲುಂಟಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಉದ್ದೇಶಪೂರ್ವಕವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಆದಾಯ ಹೆಚ್ಚಿರುವ ದೇವಸ್ಥಾನಗಳಿಂದ ಕಡಿಮೆ ಆದಾಯವಿರುವ ಹಿಂದೂ ದೇವಾಲಯಗಳಿಗೆ ಬಳಸುವುದನ್ನು ವಿರೋಧಿಸುತ್ತಾರೆ. ಬೇರೆ ಯಾವ ಧರ್ಮದ ದೇವಾಲಯಗಳಿಗೂ ಇದನ್ನು ಬಳಸುವುದಿಲ್ಲ. ಅವರಿಗೆ ಪರಿಷತ್ತಿನಲ್ಲಿ ಬಹುಮತ ಇದೆ ಎಂದು ಹೀಗೆ ಮಾಡಿದ್ದಾರೆ ಎಂದರು. ಹಿಂದೂಗಳ ಹಣವನ್ನು ಲೂಟಿ ಮಾಡಲು ಸರ್ಕಾರ ಹೊರಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆಗೆ ಪ್ರತಿಕ್ರಿಯೆ ನೀಡಿ ಅವರು ಲೂಟಿ ಮಾಡುತ್ತಿದ್ದರೆಂದೇ ರಾಜ್ಯದ ಜನ ಅವರನ್ನು ತಿರಸ್ಕಾರ ಮಾಡಿರುವುದು ಎಂದರು.

ಮಾನಹಾನಿಯಾಗುವುದಿಲ್ಲ : ಕಳೆದ ಬಾರಿ ಬಿಜೆಪಿ ಸರ್ಕಾರದ ವಿರುದ್ಧ 40% ಸರ್ಕಾರ ಎಂದು ಜಾಹೀರಾತು ನೀಡಿದ್ದಾರೆ ಎಂಬ ಬಗ್ಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯ ವಿಶೇಷ ಕ್ರಿಮಿನಲ್ ಪ್ರಕರಣ ದಾಖಲು ಮಾಡಲು ಜನಪ್ರತಿನಿಧಿ ನ್ಯಾಯಾಲಯ ಆದೇಶ ಮಾಡಿರುವ ಬಗ್ಗೆ ಉತ್ತರಿಸಿ ನಮ್ಮ ವಕೀಲರನ್ನು ನೇಮಿಸುತ್ತೇವೆ. ಅವರು ಸರಿಯಾದ ಉತ್ತರ ನೀಡುತ್ತಾರೆ ಎಂದರು. ಪ್ರಜಾಪ್ರಭುತ್ವ ದಲ್ಲಿ ಪ್ರತಿಭಟನೆ ಮಾಡಿದರೆ ಅಥವಾ ಪ್ರತಿಭಟನಾ ಜಾಹೀರಾತು ನೀಡಿದರೆ ಅದು ಎಂದರು.

ಅನಂತ ಕುಮಾರ್ ಹೆಗಡೆ ಲೋಕಸಭಾ ಸದಸ್ಯರಾಗಲು ಲಾಯಕ್ಕೇ : ಸಂಸದ ಅನಂತ ಕುಮಾರ್ ಹೆಗಡೆಯವರು ಇಂಥ ದರಿದ್ರ ಸರ್ಕಾರ ಎಂದೂ ನೋಡಿಲ್ಲ ಸರ್ಕಾರಿ ನೌಕರರಿಗೆ ಸಂಬಳ ನೀಡಲು ಹಣವಿಲ್ಲ. ರಾಜ್ಯವನ್ನು ಲೂಟಿ ಮಾಡಿ ಚುನಾವಣೆ ನಡೆಸಲು ಹೊರಟಿದ್ದಾರೆ ಎಂದಿರುವ ಬಗ್ಗೆ ಮಾತನಾಡಿ ಯಾರಾದರೂ ವೇತನ ನೀಡಿಲ್ಲ ಎಂದು ಹೇಳಿದ್ದಾರೆಯೇ ? ಎಂದು ಪ್ರಶ್ನಿಸಿದರು. ಅನಂತ ಕುಮಾರ ಹೆಗಡೆ ನಾವು ಅಧಿಕಾರಕ್ಕೆ ಬಂದಿರುವುದೇ ಈ ಸಂವಿಧಾನ ಬದಲಾಯಿಸಲು ಎಂದವರು. ಅವರು ಲೋಕಸಭಾ ಸದಸ್ಯರಾಗಲು ಲಾಯಕ್ಕೇ? ಎಂದು ಪ್ರಶ್ನಿಸಿದರು. ಅಂಥವರು ಹೇಳಿಕೆ ನೀಡಿದರೆ ಯಾವ ಕಿಮ್ಮತ್ತು ಇರುತ್ತದೆ ಎಂದರು. ಅಮೆರಿಕದ ಅಧ್ಯಕ್ಷ ಅಬ್ರಹಾಂ ಲಿಂಕನ್ ಸಂಸತ್ತು ಮತ್ತು ನ್ಯಾಯಾಲಯಗಳಿಗೆ ಜನರೇ ಮಾಲೀಕರು. ಸಂವಿಧಾನ ಕಿತ್ತೊಗೆಯಿರಿ ಎನ್ನುವವರನ್ನೇ ಕಿತ್ತೊಗೆಯಿರಿ ಎಂದು ಹೇಳಿದ್ದರು ಎಂದರು. ಸಂವಿಧಾನದ ಬಗ್ಗೆ ಗೌರವ ಇಲ್ಲದವರು ಲೋಕಸಭಾ ಸದಸ್ಯ ರಾಗಲು ಲಾಯಕ್ಕೇ ಎಂದರು.

ಅಲ್ಪಸಂಖ್ಯಾತರ ವಿರೋಧಿ : ಕಾಮಾಲೆ ರೋಗದವರಿಗೆ ಕಾಣೋದೆಲ್ಲಾ ಹಳದಿ. ಮಾತನಾಡುವುದು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುತ್ತಾರೆ ಆದರೆ ಮುಸಲ್ಮಾನರನ್ನು ವಿರೋಧಿಸುತ್ತಾರೆ. ನನ್ನನ್ನು ಏಕೆ ಸಿದ್ರಾಮುಲ್ಲಾ ಖಾನ್ ಎನ್ನುತ್ತಾರೆ ಎಂದರೆ ಅವರು ಅಲ್ಪಸಂಖ್ಯಾತರ ಧರ್ಮಕ್ಕೆ ವಿರುದ್ಧವಾಗಿರುವವರು. ಅದಕ್ಕೆ ಹಾಗೆ ಕರೆಯುತ್ತಾರೆ ಎಂದರು

ರಾಜಕಾರಣಕ್ಕಾಗಿ ಬಿಜೆಪಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ CM ಬದಲಾವಣೆ ಇಲ್ಲ, ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರೆ : ಯತೀಂದ್ರ ಸಿದ್ದರಾಮಯ್ಯ

28/06/2025 2:08 PM1 Min Read

BREAKING : ಸೆ.22ಕ್ಕೆ ಮೈಸೂರು ದಸರಾಗೆ ಚಾಲನೆ, ಅ.2 ರಂದು ಜಂಬೂ ಸವಾರಿ : ಸಿಎಂ ಸಿದ್ದರಾಮಯ್ಯ ಹೇಳಿಕೆ

28/06/2025 1:50 PM1 Min Read

BREAKING : ಈ ಬಾರಿ 11 ದಿನಗಳ ಕಾಲ ದಸರಾ ಹಬ್ಬ ಆಚರಣೆಗೆ ನಿರ್ಧಾರ : CM ಸಿದ್ದರಾಮಯ್ಯ ಹೇಳಿಕೆ

28/06/2025 1:37 PM1 Min Read
Recent News

BREAKING : ರಾಜ್ಯದಲ್ಲಿ CM ಬದಲಾವಣೆ ಇಲ್ಲ, ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರೆ : ಯತೀಂದ್ರ ಸಿದ್ದರಾಮಯ್ಯ

28/06/2025 2:08 PM

BREAKING : ಸೆ.22ಕ್ಕೆ ಮೈಸೂರು ದಸರಾಗೆ ಚಾಲನೆ, ಅ.2 ರಂದು ಜಂಬೂ ಸವಾರಿ : ಸಿಎಂ ಸಿದ್ದರಾಮಯ್ಯ ಹೇಳಿಕೆ

28/06/2025 1:50 PM

ಪಾಕಿಸ್ತಾನದಲ್ಲಿ ಭೀಕರ ಪ್ರವಾಹ: ಹಲವರು ಸಾವು, ಪ್ರವಾಹದಲ್ಲಿ ಕೊಚ್ಚಿಹೋದ ಕುಟುಂಬ

28/06/2025 1:38 PM

BREAKING : ಈ ಬಾರಿ 11 ದಿನಗಳ ಕಾಲ ದಸರಾ ಹಬ್ಬ ಆಚರಣೆಗೆ ನಿರ್ಧಾರ : CM ಸಿದ್ದರಾಮಯ್ಯ ಹೇಳಿಕೆ

28/06/2025 1:37 PM
State News
KARNATAKA

BREAKING : ರಾಜ್ಯದಲ್ಲಿ CM ಬದಲಾವಣೆ ಇಲ್ಲ, ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರೆ : ಯತೀಂದ್ರ ಸಿದ್ದರಾಮಯ್ಯ

By kannadanewsnow0528/06/2025 2:08 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳಲ್ಲೂ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಸಚಿವ…

BREAKING : ಸೆ.22ಕ್ಕೆ ಮೈಸೂರು ದಸರಾಗೆ ಚಾಲನೆ, ಅ.2 ರಂದು ಜಂಬೂ ಸವಾರಿ : ಸಿಎಂ ಸಿದ್ದರಾಮಯ್ಯ ಹೇಳಿಕೆ

28/06/2025 1:50 PM

BREAKING : ಈ ಬಾರಿ 11 ದಿನಗಳ ಕಾಲ ದಸರಾ ಹಬ್ಬ ಆಚರಣೆಗೆ ನಿರ್ಧಾರ : CM ಸಿದ್ದರಾಮಯ್ಯ ಹೇಳಿಕೆ

28/06/2025 1:37 PM

BREAKING : ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್ : `ಚಿಕ್ಕಮಗಳೂರು-ತಿರುಪತಿ’ ನೂತನ ರೈಲು ಸಂಚಾರ ಆರಂಭ.!

28/06/2025 1:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.