ಯಾದಗಿರಿ: ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು, ಹಲವರು ಗಾಯಗೊಂಡಿರುವಂತ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆಯ ಬಾದ್ಯಾಪುರ ಗ್ರಾಮದಲ್ಲಿ ಇಂದು ಸುರಪುರ ಕ್ಷೇತ್ರಕ್ಕೆ ಉಪ ಚುನಾವಣೆ ಹಾಗೂ ಯಾದಗಿರಿ ಜಿಲ್ಲೆಗೆ ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಈ ವೇಳೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.
ಎರಡು ಪಕ್ಷಗಳ ಕಾರ್ಯಕರ್ತರ ನಡುವಿನ ಗಲಾಟೆ ತಾರಕಕ್ಕೇರಿದ ವೇಳೆಯಲ್ಲಿ ದೊಣ್ಣೆ, ಕೋಲು, ಬಡಿಗೆ, ಕಲ್ಲುಗಳಿಂದ ಮಾರಾಮಾರಿಯಾಗಿದೆ. ಈ ಘಟನೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅನೇಕ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಯೋಗೀಶ್ ಗೌಡ ಕೊಲೆ ಕೇಸ್ : ಶಾಸಕ ವಿನಯ್ ಕುಲಕರ್ಣಿಗೆ ಮತದಾನಕ್ಕೆ ಅನುಮತಿ ನೀಡಿದ ಹೈಕೋರ್ಟ್
ಬೆಂಗಳೂರಲ್ಲಿ ಮಳೆಯಿಂದ ತೊಂದ್ರೆ ಆಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ