ಕೊಡಗು : ಕಳೆದ 15 ದಿನಗಳಿಂದ ಕೊಡಗಿನಲ್ಲಿ ಭಾರೀ ಮಳೆ ಸುರಿದಿದ್ದು, ಈ ಹಿನ್ನೆಲೆ ಬೆಳೆಹಾನಿಯ ಪ್ರದೇಶವನ್ನು ವೀಕ್ಷಣೆ ಮಾಡಲು ಮಧ್ಯಾಹ್ನ ತಿಮ್ಮಯ್ಯ ಸರ್ಕಲ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಬಂದಾಗ ಅವರ ಕಾರಿನ ಮೇಲೆ ಮೇಲೆ ಮೊಟ್ಟೆ ಎಸೆದಿದ್ದಾರೆ. ಬಳಿಕ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ತಿಮ್ಮಯ್ಯ ಸರ್ಕಲ್ನಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ.
ಶಿವಮೊಗ್ಗ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಬೆಳಗ್ಗೆ ಕೊಡಗಿನ ಗಡಿ ಭಾಗದ ಪೋನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ನೇತೃತ್ವದಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡುವ ಮೂಲಕ ಪ್ರತಿಭಟಿಸಿದರು.
ಸಿದ್ದರಾಮಯ್ಯ ಅವರಿದ್ದ ಕಾರನ್ನು ಅಡ್ಡಗಟ್ಟಿ ಸಾವರ್ಕರ್ ಭಾವಚಿತ್ರವನ್ನು ಕಾರಿನೊಳಕ್ಕೆ ಹಾಕಿದಲ್ಲದೇ ಕಪ್ಪು ಬಾವುಟ ಪ್ರದರ್ಶಿಸಿ `ಗೋ ಬ್ಯಾಕ್ ಸಿದ್ದುಖಾನ್, ಗೋ ಬ್ಯಾಕ್ ಸಿದ್ದರಾಮಯ್ಯ’ ಘೋಷಣೆ ಕೂಗಿದರು.
ಶಿವಮೊಗ್ಗ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ರಾಜ್ಯದಲ್ಲಿ ಮತಾಂಧ ಟಿಪ್ಪುವಿನ ಜಯಂತಿ ಆಚರಣೆ ಜಾರಿಗೆ ತಂದು ಅಮಾಯಕರ ಕೊಲೆಗೆ ಕಾರಣರಾದ ಟಿಪ್ಪು ಭಕ್ತ ಸಿದ್ದರಾಮಯ್ಯ ಕೊಡಗಿಗೆ ಕಾಲಿಡುವುದರಿಂದ ಮತ್ತೆ ಕೊಡಗಿನ ಶಾಂತಿ ಭಂಗವಾಗಲಿದೆ.
ಅಷ್ಟೇ ಅಲ್ಲದೇ ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿದ್ದಾರೆ. ಹಿಂದೂ ವಿರೋಧಿ ಸಿದ್ದರಾಮಯ್ಯ ಕೊಡಗಿಗೆ ಕಾಲಿಡಲು ಅಯೋಗ್ಯರಾಗಿದ್ದಾರೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut