ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಕೋರ್‍ಕಮಿಟಿ ಸಭೆ ಆರಂಭವಾಗಿದೆ. ಇಂದಿನ ಕೋರ್ ಕಮಿಟಿ ಸಭೆಯಲ್ಲಿ ಎಂಎಲ್ಸಿ ಚುನಾವಣೆಯಲ್ಲಿ ಗೆಲುವಿನ ಕಾರ್ಯತಂತ್ರ ರೂಪಿಸೋ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ. ಅಲ್ಲದೇ 11 ಪರಿಷತ್ ಸ್ಥಾನಗಳಿಗೂ ಅಭ್ಯರ್ಥಿಗಳ ಹೆಸರು ಫೈನಲ್ ಮಾಡೋ ಸಾಧ್ಯತೆ ಇದೆ.
ಈ ಸಂದರ್ಭದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದಗೌಡ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ|| ಸಿ.ಎನ್. ಅಶ್ವತ್ಥನಾರಾಯಣ, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಪುದುಚೇರಿ ರಾಜ್ಯ ಉಸ್ತುವಾರಿ ನಿರ್ಮಲ್ ಕುಮಾರ್ ಸುರಾಣ ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ ಅವರು ಉಪಸ್ಥಿತರಿದ್ದರು.
‘ಬೆಂಗಳೂರಿನ ಸೌಂದರ್ಯ’ಕ್ಕೆ ಹೆಚ್ಚು ಆದ್ಯತೆ ನೀಡಿ: ಸಿಟಿ ರೌಂಡ್ಸ್ ವೇಳೆ ‘ಸಿಎಂ ಸಿದ್ಧರಾಮಯ್ಯ’ ಸೂಚನೆ