ಬೆಂಗಳೂರು: ರಾಜ್ಯಪಾಲರು ಬುಲೆಟ್ ಪ್ರೂಫ್ ಕಾರಿನಲ್ಲಿ ಓಡಾಡಲು ಕಾಂಗ್ರೆಸ್ ಕಾರಣ ಎನ್ನುವ ಬಗ್ಗೆ ಕೇಳಿದಾಗ “ಬಿಜೆಪಿ, ದಳದ ಕಿಡಿಗೇಡಿಗಳು ಕಲ್ಲು ಹೊಡಯಬಹುದು ಎನ್ನುವ ಕಾರಣಕ್ಕೆ ಪೊಲೀಸ್ ಅವರು ರಕ್ಷಣೆಗಾಗಿ ಈ ಕ್ರಮ ತೆಗೆದುಕೊಂಡಿದ್ದಾರೆ. ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾನೂನು ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿ, ದಳ ಪ್ರಯತ್ನಿಸುತ್ತಿದೆ ಎನ್ನುವ ಮಾಹಿತಿ ನಮಗಿದೆ. ನಮಗೆ ರಾಜ್ಯಪಾಲರ ಮೇಲೆ ಗೌರವವಿದೆ. ಆದ ಕಾರಣ ಅವರಿಗೆ ರಕ್ಷಣೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಎಂದರು.
ವಿಧಾನಸೌಧದ ಆವರಣದಲ್ಲಿ ಗುರುವಾರ ನಡೆದ “ಬಾಗಿಲಿಗೆ ಬರಲಿದೆ ಕಾವೇರಿ ಸಂಪರ್ಕ, 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ” ಅಭಿಯಾನಕ್ಕೆ ಚಾಲನೆ ನೀಡಿ ಶಿವಕುಮಾರ್ ಅವರು ಮಾತನಾಡಿದರು.
ಕಾಂಗ್ರೆಸ್ ರಾಜ್ಯಪಾಲರಿಗೆ ಅವಮಾನಿಸಿದ್ದನ್ನು ವಿರೋಧಿಸಿ ಬಿಜೆಪಿಯವರ ಪ್ರತಿಭಟನೆ ಬಗ್ಗೆ ಕೇಳಿದಾಗ “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನನ್ನನ್ನು, ನಿಮ್ಮನ್ನು ಯಾರನ್ನು ಬೇಕಾದರೂ ಟೀಕೆ ಮಾಡಬಹುದು. ಯಾರಿಗೆ ಯಾವ ಗೌರವ ಕೊಡಬೇಕೋ ಅದನ್ನು ಖಂಡಿತ ಕೊಡಲೇಬೇಕು. ಘನವೆತ್ತ ರಾಜ್ಯಪಾಲರಿಗೆ ನಾವು ಖಂಡಿತಾ ಗೌರವ ನೀಡುತ್ತೇವೆ” ಎಂದು ಹೇಳಿದರು.
ನಾನಿರುವ ತನಕ ‘BWSSB ಖಾಸಗೀಕರಣ’ಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್