ಧಾರವಾಡ : ಹಳೆ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಪಟ್ಟಿ ಪ್ರದರ್ಶಿಸಲು ಧಾರವಾಡದ ಶಿವಾಜಿ ವೃತ್ತದಲ್ಲಿ ಶಾಸಕ ಅರವಿಂದ್ ಬೆಲ್ಲ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಸೇರಿದ್ದರು. ಈ ವೇಳೆ ಪೊಲೀಸರು ಶಾಸಕ ಅರವಿಂದ್ ಬೆಲ್ಲದ ಸೇರಿದಂತೆ 50 ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಹುಬ್ಬಳ್ಳಿಗೆ ಹೋಗುವಾಗ ಸಿಎಂ ಸಿದ್ದರಾಮಯ್ಯಗೆ ಕಪ್ಪು ಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ನಿರ್ಧರಿಸಿತ್ತು. ಶ್ರೀ ಸಿದ್ದರಾಮಯ್ಯ ತೇಳುವ ರಸ್ತೆ ಬದಿಯಲ್ಲಿ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ನಿರ್ಧರಿಸಿತ್ತು.
ಈ ವೇಳೆ ಕಾರ್ಯಕರ್ತರ ಬಳಿ ಇದ್ದ ಕಪ್ಪುಬಟ್ಟೆಯನ್ನು ಪೊಲೀಸರು ಕಸಿದುಕೊಂಡಿದ್ದಾರೆ. ಶಾಸಕ ಬೆಲ್ಲದ, ಅಮೃತ ದೇಸಾಯಿ ಸೇರಿದಂತೆ 50 ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಸರ್ಕಾರ ಹಳೆ ಹುಬ್ಬಳ್ಳಿ ಗಲಭೆಯ ವಿಚಾರವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕಪ್ಪು ಪಟ್ಟಿಗೆ ಪ್ರದರ್ಶಿಸಲು ನಿರ್ಧರಿಸಲಾಗಿತ್ತು.
ಹುಬ್ಬಳ್ಳಿಯಲ್ಲೂ ಇಬ್ಬರು ಪೊಲೀಸ್ ವಶಕ್ಕೆ
ಇದೆ ವಿಚಾರವಾಗಿ ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶಿಸಿದರು. ಹುಬ್ಬಳ್ಳಿಯ ಗೋಕುಲ್ ರೋಡ್ ನಲ್ಲಿ ಕಪ್ಪು ಬಟ್ಟೆ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಬಿಜೆಪಿ ಕಾರ್ಯಕರ್ತರಾದ ಜಗದೀಶ್ ಕಂಬಳಿ, ಮಂಜುನಾಥ್ ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.