ಬೆಂಗಳೂರು : ರೈತ ವಿರೋಧಿ ಸರ್ಕಾರದ ವಿರುದ್ಧ ರಾಜಭವನದಲ್ಲಿ ರಾಜ್ಯಪಾಲ ಗೆಹಲೋಟ್ ಅವರಿಗೆ ಬಿಜೆಪಿ ನಿಯೋಗ ದೂರು ನೀಡಿದೆ ರೈತ ಹಾಗೂ ಕೃಷಿ ಕಾರ್ಮಿಕ ವಿರೋಧಿ ನೀತಿಗಳ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಬೇಜವಾಬ್ದಾರಿ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದೇವೆ. ಬರ ಬಂದರು ಸರ್ಕಾರ ರೈತರಿಗೆ ಸರಿಯಾದ ರೀತಿಯಲ್ಲಿ ಪರಿಹಾರ ಹಣ ಬಿಡುಗಡೆ ಮಾಡಿಲ್ಲ. ಮುಖ್ಯಮಂತ್ರಿ ಉಪಮುಖ್ಯಮಂತ್ರಿ ರೈತರ ಸಾವಿಗೆ ಕಿಂಚಿತ್ತು ಬೆಲೆ ಕೊಟ್ಟಿಲ್ಲ.ಕೇಂದ್ರ ನಮ್ಮ ನೆರವಿಗೆ ಬರುತ್ತಿಲ್ಲ ಅಂತ ಬರೀ ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ.ನಾವು ಅಧಿಕಾರದಲ್ಲಿದ್ದಾಗ 3000 ಕೋಟಿ ಪರಿಹಾರ ನೀಡಿದ್ದೇವೆ ಎಂದು ಹೇಳಿದರು.
ರೈತರ ಸಮಸ್ಯೆಗೆ ಸ್ಪಂದಿಸದಿದ್ದರೆ ಸರ್ಕಾರ ಸತ್ತಂತೆ ಎಂದು ಬೆಂಗಳೂರಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದರು.18 ಸಾವಿರ ಕೋಟಿ ನಷ್ಟ ಆಗಿದೆ ಎಂದು ಕೇಂದ್ರಕ್ಕೆ ಮನವಿ ಸಲ್ಲಿಕೆಯಾಗಿದೆ.ಆದರೆ ರಾಜ್ಯ ಸರ್ಕಾರದಿಂದ 105 ಕೋಟಿ ರೂಪಾಯಿ ಮಾತ್ರ ಬಿಡುಗಡೆಯಾಗಿದೆ ಎಂದು ತಿಳಿಸಿದರು.
ಬೆಳಗಾವಿ ಅಧಿವೇಶನದಲ್ಲಿ ತಕ್ಷಣ ಪರಿಹಾರ ಕೊಡುವುದಾಗಿ ಹೇಳಿದ್ದರು.ರೈತರ ಬಗ್ಗೆ ಕಾಳಜಿ ಇಲ್ಲದ ಸರ್ಕಾರ ಬಹಳ ದಿನ ಇರುವುದಿಲ್ಲ.ರಾಜ್ಯಪಾಲರು ಸರ್ಕಾರಕ್ಕೆ ಸೂಚನೆ ನೀಡುತ್ತೇನೆ ಎಂದು ಹೇಳಿದ್ದಾರೆ.ರೈತರು ದಂಗೆ ಹೇಳುವ ದಿನ ದೂರ ಇಲ್ಲ ಎಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.ಮಾಜಿ ಮುಖ್ಯಮಂತ್ರಿಗಳಾದ ಡಿವಿ ಸದಾನಂದ ಗೌಡ, ಶಾಸಕರಾದ ಡಾಕ್ಟರ್ ಸಿಎನ್ ಅಶ್ವತ್ಥ ನಾರಾಯಣ್, ಎಸ್ ರಘು ಎಸ್, ಮುನಿರಾಜು ಹಾಗೂ ಸಿಕೆ ರಾಮಮೂರ್ತಿ ಈ ಸಂದರ್ಭದಲ್ಲಿ ಉಪಸ್ಥಿತಿ ಇದ್ದರು.