ಮೈಸೂರು : ರಾಜ್ಯದಲ್ಲಿ 14 ಸಂಸದರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲುತ್ತಾರೆ ಎನ್ನುವ ಭೀತಿಯಿಂದ ಬಿಜೆಪಿ 14 ಸಂಸದರಿಗೆ ಟಿಕೆಟ್ ನೀಡಿಲ್ಲ. ಇನ್ನೂ ಪ್ರತಾಪ ಸಿಂಹ ಹಾಗೂ ಡಿವಿ ಸದಾನಂದ ಗೌಡ ಗೋವಿಂದ ಗೋವಿಂದ ಎಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದರು.
ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಕಾಂಗ್ರೆಸ್ ಪ್ರಜಾ ಧ್ವನಿ ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಭಾರತೀಯ ಜನತಾ ಪಕ್ಷ 14 ಸಂಸದರಿಗೆ ಟಿಕೆಟ್ ನಿರಾಕರಿಸಿದೆ. ಯಾಕೆಂದರೆ ಅವರೆಲ್ಲರೂ ಸೋಲುತ್ತಾರೆ ಎಂದು ಮೊದಲೇ ಗೊತ್ತಿತ್ತು. ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಹೋರಾಟ ಮಾಡಿದ್ದ adareಬಿಜೆಪಿಯವರು ಯಾಕೆ ಪ್ರತಾಪ್ ಸಿಂಹ ಹಾಗೆ ಟಿಕೆಟ್ ಕೊಡಲಿಲ್ಲ? ಎಂದು ಪ್ರಶ್ನಿಸಿದರು.
ಇನ್ನೂ ಚಿಕ್ಕಮಗಳೂರಿನಲ್ಲಿ ಶೋಭಕ್ಕ ನೀನು ಹೋಗಕ್ಕ ಅಂತ ಹೊರಗಡೆ ಕಳುಹಿಸಿಬಿಟ್ಟರು. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೆ, ನಳಿನ್ ಕುಮಾರ್ ಕಟೀಲು ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದರು, ಸಂಸದ ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾಯಿಸುತ್ತೇವೆ ಅಂತಿದ್ದ, ಕೇಂದ್ರ ಸಚಿವ ಎ ನಾರಾಯಣಸ್ವಾಮಿಗೂ ಬಿಜೆಪಿ ಟಿಕೆಟ್ ಕೊಟ್ಟಿಲ್ಲ.
ಈಶ್ವರಪ್ಪ ನನ್ನ ದೇವರೇ ಕಾಪಾಡಬೇಕು ಎಂದು ಲೇವಡಿ ಮಾಡಿದರು.ಕಾಂಗ್ರೆಸ್ನವರು ಒಳ್ಳೆಯ ಅಭ್ಯರ್ಥಿಗಳಿಗೆ ಟಿಕೆಟ್ ಕೊಟ್ಟಿದ್ದೇವೆ. ರಾಜ್ಯದಲ್ಲಿ ಒಕ್ಕಲಿಗ ಸಮಾಜದವರಿಗೆ ಹೆಚ್ಚು ಟಿಕೆಟ್ ನೀಡಿದ್ದೇವೆ ಎಂದು ಹುಣಸೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.