ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜಾತಿ ಹೆಸರು ಹೇಳಿ ಮತದಾರರ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಆರೋಪಿಸಿ ಇದೀಗ ಬಿಜೆಪಿ ಬೆಂಗಳೂರಿನಲ್ಲಿ ಚುನಾವಣಾ ಆಯೋಗಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ.ಬಿಜೆಪಿಯ ಸಿಎನ್ ಅಶ್ವಥ್ ನಾರಾಯಣ ನೇತೃತ್ವದಲ್ಲಿ ದೂರು ಸಲ್ಲಿಸಲಾಗಿದೆ. ಅದರ ಜೊತೆಗೆ ಕಾಂಗ್ರೆಸ್ ನಿಂದ ಗ್ಯಾರಂಟಿ ಕಾರ್ಡ್ ಹಂಚಿಕೆ ಬಗ್ಗೆಯೂ ಕೂಡ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.