ಬೆಂಗಳೂರು: ಡಿಕೆ ಶಿವಕುಮಾರ್ ಅವರು ತಮ್ಮ ಅಧಿಕೃತ ಫೇಸ್ ಬುಕ್ ಪೇಜ್ ನಲ್ಲಿ ಕರ್ನಾಟಕ ಸರ್ಕಾರದ ಚಿಹ್ನೆ ಮತ್ತು ಕಾಂಗ್ರೆಸ್ ಪಕ್ಷದ ಚಿಹ್ನೆ ಬಳಸಿಕೊಂಡು ಡಿ.ಕೆ ಸುರೇಶ್ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುತ್ತಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿರುವಂತ ಬಿಜೆಪಿಯು, ಅದರಲ್ಲಿ ದಿನಾಂಕ 24-03-2024ರಂದು ಡಿ.ಕೆ ಶಿವಕುಮಾರ್ ತಮ್ಮ ಅಧಿಕೃತ ಫೇಸ್ ಬುಕ್ ಪೇಜ್ ನಲ್ಲಿ ಅವರ ತಮ್ಮ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಡಿ.ಕೆ ಸುರೇಶ್ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ ಎಂದಿದೆ.
ಅಭಿವೃದ್ಧಿಯೇ ನಮ್ಮ ಮೂಲ ಮಂತ್ರ, ನಮ್ಮ ಜನಪರ ಕಾರ್ಯಗಳ ಬಗ್ಗೆ ನಾಗರಿಕರೊಬ್ಬರ ಅಭಿಪ್ರಾಯ ಕೇಳಿ ಎಂಬ ಶೀರ್ಷಿಕೆಯಲ್ಲಿ ವೀಡಿಯೋವನ್ನು ಹಂಚಿಕೊಂಡಿದ್ದು, ಆ ವೀಡಿಯೋದಲ್ಲಿ ಕರ್ನಾಟಕ ಸರ್ಕಾರದ ಚಿಹ್ನೆ ಹಾಗೂ ಕಾಂಗ್ರೆಸ್ ಪಕ್ಷದ ಚಿಹ್ನೆಯನ್ನು ಬಳಸಿಕೊಂಡು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರೋದಾಗಿ ಆರೋಪಿಸಿದೆ.
ಈ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಆ ವೀಡಿಯೋದ ಖರ್ಚು ವೆಚ್ಚಗಳನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಡಿ.ಕೆ ಸುರೇಶ್ ಅವರ ವೆಚ್ಚಕ್ಕೆ ಹಾಕಬೇಕು ಎಂಬುದಾಗಿ ಮನವಿ ಮಾಡಲಾಗಿದೆ.
ಲೋಕಸಭಾ ಚುನಾವಣೆ: ನಾಳೆಯಿಂದ ಬೆಂಗಳೂರಿನ ಈ ಸ್ಥಳಗಳಲ್ಲಿ ‘ನಾಮಪತ್ರ’ ಸ್ವೀಕಾರ
BREAKING: ‘ಯತ್ನಾಳ್’ ವಿರುದ್ಧ ‘ಡಿಕೆಶಿ ಮಾನನಷ್ಟ’ ಕೇಸ್: ಅರ್ಜಿ ವರ್ಗಾವಣೆಗೆ ‘ಹೈಕೋರ್ಟ್ ನಕಾರ’