ಬೆಂಗಳೂರು: ಮತದಾರರಿಗೆ ಅನುದಾನ ನೀಡೋದಾಗಿ ಹೇಳಿಕೆ ನೀಡುವ ಮೂಲಕ ಆಮಿಷವೊಡ್ಡಿದಂತ ಸಚಿವ ಡಿ.ಸುಧಾಕರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
ಚಿತ್ರದುರ್ಗ ಜಿಲ್ಲೆಯ ತಳುಕಿನಲ್ಲಿ ಸಚಿವ ಡಿ.ಸುಧಾಕರ್ ಅವರು 25 ಕೋಟಿ ಅನುದಾನವನ್ನು ಕಾಂಗ್ರೆಸ್ ಅಭ್ಯರ್ಥಿಯನ್ನು ಸಾಕಷ್ಟು ಲೀಡ್ ನಿಂದ ಗೆಲ್ಲಿಸಿದ್ರೆ ನೀಡೋದಾಗಿ ಆಮಿಷ ಒಡ್ಡುವಂತ ಹೇಳಿಕೆ ನೀಡಿದ್ದರು.
ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು. 70 ಸಾವಿರ ಲೀಡ್ ಕೊಟ್ಟು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿದ್ದೇ ಆದಲ್ಲಿ ತಳುಕು ಅಭಿವೃದ್ಧಿಗಾಗಿ 20 ಕೋಟಿ ಅನುದಾನವನ್ನು ಸರ್ಕಾರ ನೀಡಲಿದೆ. ಈಗಾಗಲೇ ಸಿಎಂ ಸಿದ್ಧರಾಮಯ್ಯ ಜೊತೆಗೆ ಈ ಬಗ್ಗೆ ಮಾತನಾಡಿದ್ದಾಗಿ ಹೇಳಿದ್ದಾರೆ. ಈ ಮೂಲಕ ಚುನಾವಣಾ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎನ್ನಲಾಗುತ್ತಿದೆ.
ಈ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದಿಂದ ನೀತಿ ಸಂಹಿತೆ ಉಲ್ಲಂಘನೆಯ ಆರೋಪದ ಹಿನ್ನಲೆಯಲ್ಲಿ ಚುನಾವಣಾ ಆಯೋಗಕ್ಕೆ ಸಚಿವ ಡಿ.ಸುಧಾಕರ್ ವಿರುದ್ಧ ದೂರು ನೀಡಲಾಗಿದೆ.
BREAKING : ನ್ಯಾಯಾಂಗ ದುರ್ಬಲಗೊಳಿಸುವ ಪ್ರಯತ್ನ ಖಂಡಿಸಿ 21 ನಿವೃತ್ತ ನ್ಯಾಯಾಧೀಶರಿಂದ ‘CJI’ಗೆ ಪತ್ರ
ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಕುಸಿತ ; 14,000ಕ್ಕೂ ಹೆಚ್ಚು ಉದ್ಯೋಗಿಗಳ ವಜಾಕ್ಕೆ ಮುಂದಾದ ‘ಟೆಸ್ಲಾ’