ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದಂತ ವಿವಿಧ ರಾಜಕೀಯ ನಾಯಕರ ವಿರುದ್ಧ ಸರಣಿ ದೂರುಗಳು ದಾಖಲಾಗುತ್ತಿವೆ. ಡಿಸಿಎಂ ಡಿಕೆ ಶಿವಕುಮಾರ್ ಬೆನ್ನಲ್ಲೇ, ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಲವು ಸಚಿವರ ವಿರುದ್ಧ ಚುನಾವಣಾ ಆಯೋಗದಿಂದ ಬಿಜೆಪಿ ದೂರು ನೀಡಿದೆ.
ಇಂದು ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳಿಗೆ ಬಿಜೆಪಿ ದೂರು ಸಲ್ಲಿಸಿದೆ. ದೂರಿನಲ್ಲಿ ಕರ್ನಾಟಕ ಸರ್ಕಾರದ ಕೆಲವು ಸಚಿವರುಗಳು ತಮ್ಮ ಸರ್ಕಾರಿ ಕಚೇರಿಗಳನ್ನು ಲೋಕಸಭಾ ಚುನಾವಣೆಯ ಕಾರ್ಯಗಳಿಗೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂದು ವರ್ತಮಾನ ಬಂದಿರುತ್ತದೆ ಎಂದಿದೆ.
ಈ ವಿಚಾರವನ್ನು ಚುನಾವಣಾ ಆಯೋಗವು ಗಂಭೀರವಾಗಿ ಪರಿಗಣಿಸಿ, ಸದರಿಯವರುಗಳ ವಿರುದ್ಧ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ಈ ಮೂಲಕ ಸರ್ಕಾರಿ ನಿವಾಸದಲ್ಲಿ ಲೋಕಸಭಾ ಚುನಾವಣೆಯ ದರ್ಬಾರ್ ನಡೆಸುತ್ತಿರುವಂತ ರಾಜ್ಯದ ಕಾಂಗ್ರೆಸ್ ಸರ್ಕಾರದ ಸಚಿವರಿಗೆ ಬಿಜೆಪಿ ಶಾಕ್ ನೀಡಿದೆ.
SSLC ಪರೀಕ್ಷೆ: ಇಂದು ‘8.27 ಲಕ್ಷ ವಿದ್ಯಾರ್ಥಿ’ಗಳು ಹಾಜರ್, ‘9 ಮಂದಿ’ ಡಿಬಾರ್ | SSLC Exam
BREAKING: ‘ಯತ್ನಾಳ್’ ವಿರುದ್ಧ ‘ಡಿಕೆಶಿ ಮಾನನಷ್ಟ’ ಕೇಸ್: ಅರ್ಜಿ ವರ್ಗಾವಣೆಗೆ ‘ಹೈಕೋರ್ಟ್ ನಕಾರ’