ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದಂತ ಮಾಜಿ ಶಾಸಕ ಯತೀಂದ್ರ ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
ಇಂದು ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ನೀಡಿರುವಂತ ದೂರಿನಲ್ಲಿ ಶಾಸಕ ಯತೀಂದ್ರ ಸಿದ್ಧರಾಮಯ್ಯ ಅವರು ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ಇದೇ ವಿಚಾರವಾಗಿ ಮಾತನಾಡಿದ್ದಂತ ವಿಪಕ್ಷ ನಾಯಕ ಆರ್.ಅಶೋಕ್, ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವರ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು. ಯತೀಂದ್ರ ಹೀಗೆಯೇ ಮಾತನಾಡುತ್ತಿದ್ದರೆ ರಾಹುಲ್ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದಿದ್ದರು.
ಸಿಎಂ ಸಿದ್ದರಾಮಯ್ಯ ಅವರ ಮಗ ಎನ್ನುವ ಕಾರಣಕ್ಕೆ ಹಾಗೂ ರಾಷ್ಟ್ರ ನಾಯಕರ ಬಗ್ಗೆ ಮಾತನಾಡಿದರೆ ದೊಡ್ಡ ವ್ಯಕ್ತಿಯಾಗುತ್ತೇನೆ. ಇದರಿಂದ ಬೆಲೆ ಬರುತ್ತದೆ ಎನ್ನುವ ಕಾರಣಕ್ಕೆ ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಕುರಿತು ಟೀಕೆ ಮಾಡಿದ್ದಾರೆ. ಹತಾಶ ಮನೋಭಾವ, ಬುದ್ಧಿಭ್ರಮಣೆ ಹಾಗೂ ಅಪ್ರಬುದ್ಧತೆಯಿಂದ ಅವರು ಮಾತನಾಡಿದ್ದಾರೆ. ಅವರ ಪ್ರಜ್ಞೆಯ ಮಟ್ಟ ಬಹಳ ಕಡಿಮೆ ಇದೆ ಎಂದು ಹೇಳಿದ್ದರು.
ಮೈಸೂರಿನ ರಾಜಕಾರಣದ ಬಗ್ಗೆ ಮಾತನಾಡಲು ಯತೀಂದ್ರ ಅವರಿಗೆ ಯೋಗ್ಯತೆ ಇಲ್ಲ. ಅಲ್ಲಿನ ರಾಜಕಾರಣ ಬಿಟ್ಟು ಕೇಂದ್ರದ ರಾಜಕಾರಣದ ಬಗ್ಗೆ ಅವರು ಮಾತನಾಡಿದ್ದಾರೆ. ಇಂತಹ ಬಾಲಿಶ ಹಾಗೂ ಕೊಬ್ಬಿನ ಹೇಳಿಕೆ ನೀಡುವುದು ಕಾಂಗ್ರೆಸ್ಸಿನ ಡಿಎನ್‌ಎ ನಲ್ಲೇ ಇದೆ. ಈಗಾಗಲೇ ರಾಹುಲ್ ಗಾಂಧಿ ಬಾಲಿಶ ಹೇಳಿಕೆ ನೀಡಿ ಜೈಲಿಗೆ ಹೋಗುವ ಸ್ಥಿತಿ ಬಂದಿದೆ. ಯತೀಂದ್ರ ಅವರೂ ಹೀಗೆ ಮಾತನಾಡುತ್ತಿದ್ದರೆ ಕೊನೆಗೆ ಜೈಲೇ ಗತಿಯಾಗಲಿದೆ. ಅವರು ಎಚ್ಚರದಿಂದ ಮಾತನಾಡಲಿ ಎಂದು ತಿಳಿಸಿದ್ದರು.
ಸೂರ್ಯಚಂದ್ರರು ಹುಟ್ಟೋದು ಎಷ್ಟು ಸತ್ಯವೋ ‘ಮೋದಿ ಸರ್ಕಾರ’ ಮತ್ತೆ ಬರುವುದು ಅಷ್ಟೇ ಸತ್ಯ – HDK
BIG NEWS : ‘PSI’ ಹುದ್ದೆಗಳ ನೇಮಕಾತಿಯ ಮರುಪರೀಕ್ಷೆ : ಅಂತಿಮ ಅಂಕಪಟ್ಟಿ ಪ್ರಕಟ