ಚಾಮರಾಜನಗರ: ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ತಿಸ್ಕೃತಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಹೀಗಾಗಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ತಿರಸ್ಕೃತಗೊಳ್ಳೋ ಸಾಧ್ಯತೆ ಇದೆ.

ಇಂದು ಬಿಜೆಪಿಯ ಲೋಕಸಭಾ ಚುನಾವಣಾ ಅಭ್ಯರ್ಥಿ ಬಾಲರಾಜು, ಜಿಲ್ಲಾ ಮಾಜಿ ಅಧ್ಯಕ್ಷರು, ಏಜೆಂಟ್ ನಾರಾಯಮ ಪ್ರಸಾದ್ ಅವರನ್ನೊಳಗೊಂಡ ಬಿಜೆಪಿ ಮುಖಂಡರು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಚಾಮರಾಜನರಗ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ತಿರಸ್ಕೃತಗೊಳಿಸುವಂತೆ ಮನವಿ ಮಾಡಿದ್ದಾರೆ.

ಬಿಜೆಪಿ ಸಲ್ಲಿಸಿರುವಂತ ದೂರಿನಲ್ಲಿ ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸಲ್ಲಿಸಲಾಗಿರುವಂತ ಪ್ರಮಾಣ ಪತ್ರದಲ್ಲಿ ಪ್ರಮುಖ ಮಾಹಿತಿ ಮುಚ್ಚಿಟ್ಟಿದ್ದಾರೆ ಎಂಬುದಾಗಿ ಆರೋಪಿಸಿದೆ.

ವೈವಾಹಿಕ ಜೀನವದ ಕುರಿತು ಮಾಹಿತಿ ಮರೆ ಮಾಚಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಪ್ರಮಾಣ ಪತ್ರದಲ್ಲಿ ಹೆಂಡತಿ, ಮಕ್ಕಳ, ಕುಟುಂಬದ ಮಾಹಿತಿ ಮುಚ್ಚಿಟ್ಟಿರೋದಾಗಿ ಗಂಭೀರ ಆರೋಪ ಮಾಡಲಾಗಿದೆ.

ಪತ್ನಿ, ಮಕ್ಕಳು, ತಂದೆ-ತಾಯಿಯ ಆಸ್ತಿ ವಿವರವನ್ನು ನಾಮಪತ್ರದ ಜೊತೆಗೆ ಸಲ್ಲಿಸಲಾಗಿರುವಂತ ಅಫಿಡವಿಟ್ ನಲ್ಲಿ ಸಲ್ಲಿಸಿಲ್ಲ. ಹೀಗಾಗಿ ಅವರ ನಾಮಪತ್ರವನ್ನು ಅಸಿಂಧುಗೊಳಿಸುವಂತೆ ಚಾಮರಾಜನಗರ ಜಿಲ್ಲಾ ಚುನಾವಣಾಧಿಕಾರಿಗಳಿಗೆ ದೂರು ನೀಡಲಾಗಿದೆ. ಹೀಗಾಗಿ ಸುನೀಲ್ ಬೋಸ್ ಅವರ ನಾಮಪತ್ರ ತಿರಸ್ಕೃತವಾಗೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಅಂದಹಾಗೇ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್, ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರ ಪುತ್ರ ಆಗಿದ್ದಾರೆ.

BIG NEWS : ನಾನು ರಾಜಕಾರಣದಲ್ಲಿ ಎಷ್ಟು ದಿನ ಇರುತ್ತೇನೆ ಗೊತ್ತಿಲ್ಲ : ನಿವೃತ್ತಿ ಬಗ್ಗೆ ಡಿಸಿಎಂ ಡಿಕೆ ಅಚ್ಚರಿ ಹೇಳಿಕೆ

BIG BREAKING : ರಾಮೇಶ್ವರಂ ‘ಕೆಫೆ ಬಾಂಬ್’ ಬ್ಲಾಸ್ಟ್ ಪ್ರಕರಣ : ‘BJP’ ಕಾರ್ಯಕರ್ತನನ್ನು ವಶಕ್ಕೆ ಪಡೆದ ‘NIA’

Share.
Exit mobile version