ಮಂಡ್ಯ: ಸಾರ್ವಜನಿಕರ ತೆರಿಗೆ ಹಣದಲ್ಲಿ ಕೇಂದ್ರಸರ್ಕಾರದ ಯೋಜನೆಯ ಬಗ್ಗೆ ಸುಳ್ಳು ಸುದ್ದಿ ಪ್ರಕಟಣೆ ನೀಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗು ಇಲಾಖೆ ಮುಖ್ಯ ಕಾರ್ಯಧರ್ಶಿ ವಿರುದ್ಧ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬಿಜೆಪಿ ದೂರು ನೀಡಿದೆ.
ಇಂದು ಮಂಡ್ಯ ಬಿಜೆಪಿ ವಕ್ತಾರ ಸಿ.ಟಿ ಮಂಜುನಾಥ್ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬಿಜೆಪಿ ದೂರು ನೀಡಿದೆ. ಅವರು ನೀಡಿರುವಂತ ದೂರಿನಲ್ಲಿ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ಜಾಹೀರಾತುಗಳು ರಾಜಕೀಯ ಪ್ರೇರಿತವಾಗಿರಬಾರದು ಎಂದಿದ್ದು ,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿ ಬಿ ಜಿ ರಾಮ್ ಜಿ ಬಗ್ಗೆ ಪತ್ರಿಕೆಗಳಿಗೆ ನೀಡಿರುವ ಈ ಜಾಹೀರಾತು “ರಾಜಕೀಯ ಪಕ್ಷಪಾತದಿಂದ ಕೂಡಿದೆ. ತೆರಿಗೆದಾರರ ಹಣವನ್ನು ಕೇಂದ್ರದ ಕಾಯ್ದೆಯ ವಿರುದ್ಧ ಅಪಪ್ರಚಾರ ಮಾಡಲು ಬಳಸುವುದು ಸಾರ್ವಜನಿಕ ಹಣದ ದುರುಪಯೋಗವಾಗಿದೆ ಎಂದಿದ್ದಾರೆ.
ಜಾಹೀರಾತಿನಲ್ಲಿ ಮಹಾತ್ಮ ಗಾಂಧೀಜಿಯವರ ವ್ಯಂಗ್ಯಚಿತ್ರವನ್ನು ಬಳಸಿ ಕೇಂದ್ರದ ಯೋಜನೆಯನ್ನು ಟೀಕಿಸಿರುವುದು ಗಾಂಧೀಜಿಯವರಿಗೆ ಮಾಡಿದ ಅವಮಾನವಾಗಿದೆ. ಜಾಹೀರಾತು ಕೇವಲ ರಾಜಕೀಯ ಟೀಕೆಯಾಗಿದ್ದರೆ ಅದು ಅಭಿವ್ಯಕ್ತಿ ಸ್ವಾತಂತ್ರ್ಯದ ಅಡಿಯಲ್ಲಿ ಬರಬಹುದು, ಆದರೆ ಸಾರ್ವಜನಿಕ ಹಣ ಬಳಸಿರುವುದರಿಂದ ಅದು ಸುಪ್ರೀಂ ಕೋರ್ಟ್‌ನ 2015ರ ಮಾರ್ಗಸೂಚಿಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ.
ಸರ್ಕಾರಿ ಜಾಹೀರಾತುಗಳು ಕೇವಲ ಮಾಹಿತಿಯುಕ್ತವಾಗಿರಬೇಕು. ಯಾವುದೇ ರಾಜಕೀಯ ಪಕ್ಷದ ಹಿತಾಸಕ್ತಿ ಉತ್ತೇಜಿಸಲು ಅಥವಾ ವಿರೋಧ ಪಕ್ಷದ ವಿರುದ್ಧ “ನಕಾರಾತ್ಮಕ ಚಿತ್ರಣ” (Negative Impression) ನೀಡಲು ಸಾರ್ವಜನಿಕ ಹಣ ಬಳಸುವಂತಿಲ್ಲ.ರಾಜಕೀಯ ಟೀಕೆಗಳಿಗಾಗಿ ಸರ್ಕಾರಿ ಇಲಾಖೆಯ ಹೆಸರಿನಲ್ಲಿ ಜಾಹೀರಾತು ನೀಡುವುದು ಸಂವಿಧಾನದ 14ನೇ ವಿಧಿ (ಸಮಾನತೆ) ಮತ್ತು 21ನೇ ವಿಧಿಯ ಉಲ್ಲಂಘನೆ ಎಂದು ಕೋರ್ಟ್ ಹೇಳಿದೆ.
ಪ್ರಜಾಪ್ರಭುತ್ವದಲ್ಲಿ ಯಾವುದೇ ವಿಷಯದ ಬಗ್ಗೆ ಟೀಕೆ ಮಾಡಲು ಅಥವಾ ಭಿನ್ನಾಭಿಪ್ರಾಯ ವ್ಯಕ್ತಪಡಿಸಲು ಅವಕಾಶವಿದೆ. ಆದರೆ, ಸರ್ಕಾರಿ ಯಂತ್ರವನ್ನು ಬಳಸಿ ಜನರ ದಾರಿ ತಪ್ಪಿಸುವಂತಹ ಅಥವಾ ಸುಳ್ಳು ಮಾಹಿತಿ ನೀಡುವಂತಹ ‘ಅಪಪ್ರಚಾರ’ ಮಾಡುವುದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ.
ಕೇಂದ್ರದ ಕಾನೂನಿನ ಬಗ್ಗೆ ತನ್ನ ಅಸಮ್ಮತಿಯನ್ನು ವ್ಯಕ್ತಪಡಿಸಬಹುದು ಅಥವಾ ಕೋರ್ಟ್‌ನಲ್ಲಿ ಸವಾಲು ಹಾಕಬಹುದು. ಆದರೆ, ಅಧಿಕೃತವಾಗಿ ಆ ಕಾನೂನನ್ನು ಜಾರಿಗೆ ತರುವಲ್ಲಿ ಅಡ್ಡಿಪಡಿಸುವುದು ಅಥವಾ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ನೀಡುವುದು ಸಾಂವಿಧಾನಿಕವಾಗಿ ತಪ್ಪು ಹಾಗಾಗಿ ಸಾರ್ವಜನಿಕರ ತೆರಿಗೆ ಹಣವನ್ನು ದುರುಪಯೋಗ ಪಡಿಸಿಕೊಂಡು ಜಾಹಿರಾತು ನೀಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಶ್ರೀಯುತ ಪ್ರಿಯಾಂಕ್ ಖರ್ಗೆ ಹಾಗು ಇಲಾಖೆ ಮುಖ್ಯಕಾರ್ಯಧರ್ಶಿಯವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು, ಹಾಗು ಆ ಜಾಹಿರಾತಿಗೆ ಬಳಸಿರುವ ತೆರಿಗೆದಾರರ ಹಣವನ್ನು ವೈಯುಕ್ತಿಕವಾಗಿ ಇಲಾಖೆ ಸಚಿವ. ಹಾಗು ಈ ಮೂಲಕ ಮನವಿ ಮಾಡಲಾಗಿದೆ.

BREAKING: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ‘SIT ತನಿಖೆ’ಗೆ ವಹಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಈಗ ಮೆಟ್ರೋ ರೈಲಿನಲ್ಲಿ ಈ ಎಲ್ಲವೂ ನಿಷೇಧ, ತಪ್ಪಿದ್ರೆ ಕೇಸ್, ದಂಡ ಫಿಕ್ಸ್








