ಹುಬ್ಬಳ್ಳಿ:ರಾಮ ಜನ್ಮಭೂಮಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಯನ್ನು ಪೊಲೀಸರು ಬಂದಿಸಿದ್ದು ರಾಜಕೀಯ ಸ್ವರೂಪ ಪಡೆದುಕೊಂಡಿದೆ.ಬಿಜೆಪಿ ಮುಖಂಡರು ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಹೋರಾಟ ನಡೆಸುತ್ತಿದ್ದಾರೆ.
ಹುಬ್ಬಳ್ಳಿಯಲ್ಲಿ ಬಿಜೆಪಿ ಮುಖಂಡರು ಸಿಎಂ ಗೃಹ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಪ್ರತಿಪಕ್ಷ ನಾಯಕ ಆರ್ ಅಶೋಕ್,ಮಹೇಶ್ ಟೆಂಗಿನಕಾಯಿ,ಅರವಿಂದ ಬೆಲ್ಲದ್ ಸೇರಿದಂತೆ 42 ಬಿಜೆಪಿ ಮುಖಂಡರ ವಿರುದ್ದ ಕಾಂಗ್ರೆಸ್ ನಾಯಕರು ದೂರು ನೀಡಿದ್ದಾರೆ.ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಿಜೆಪಿ ಕೋಮು ಗಲಭೆ ಸೃಷ್ಟಿ ಮಾಡಿದೆ ಎಂದು ಕಾಂಗ್ರೆಸ್ ಮುಖಂಡರು ದೂರು ದಾಖಲಿಸಿದ್ದಾರೆ.ಈ ಹಿನ್ನೆಲೆಯಲ್ಲಿ FIR ದಾಖಲಾಗಿದೆ.