ಬೆಂಗಳೂರು : ಸಂಸತ್ ನಲ್ಲಿ ಇಂದು ವಕ್ಫ್ ಬೋರ್ಡ್ ತಿದ್ದುಪಡಿ ಬಿಲ್ ಮಂಡನೆಯಾಗುತ್ತಿದೆ. ಬಿಜೆಪಿ ಹಾಗೂ ಎನ್.ಡಿ.ಎ ಸರ್ಕಾರ ದೇಶದ ಅಲ್ಪಸಂಖ್ಯಾತರ ವಿರೋಧಿಗಳು ಎಂಬುದನ್ನು ಅವರ ಈ ನಡೆ ನಿರೂಪಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ . ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ ಅವರ ಪ್ರತಿಮೆಗೆ ಗೌರವ ನಮನ ಸಲ್ಲಿಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಸಂಸತ್ ನಲ್ಲಿ ಇಂದು ವಕ್ಫ್ ಬೋರ್ಡ್ ತಿದ್ದುಪಡಿ ಬಿಲ್ ಮಂಡನೆಯಾಗುತ್ತಿದೆ. ಬಿಜೆಪಿ ಹಾಗೂ ಎನ್.ಡಿ.ಎ ಸರ್ಕಾರ ದೇಶದ ಅಲ್ಪಸಂಖ್ಯಾತರ ವಿರೋಧಿಗಳು ಎಂಬುದನ್ನು ಅವರ ಈ ನಡೆ ನಿರೂಪಿಸುತ್ತಿದೆ. ಅವರು ಜಾತ್ಯಾತೀತ, ಸಾಮಾಜಿಕ ನ್ಯಾಯದ ಸಿದ್ದಾಂತಗಳನ್ನು ಬೆಂಬಲಿಸದ ಕೋಮುವಾದಿ ಪಕ್ಷವಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದ ಅಭಿವೃದ್ದಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್ ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ. ಕನ್ನಡ ನಾಡಿನ ಅಭಿವೃದ್ಧಿಗೆ ಕೊಡುಗೆ ನೀಡಿದ ದಿವಂಗತ ಎಸ್ ನಿಜಲಿಂಗಪ್ಪ ಅವರು ಇಂದಿಗೂ ಜನಮಾನಸದಲ್ಲಿ ನೆಲೆಸಿದ್ದಾರೆ. ಅವರು ಈ ದೇಶ ಕಂಡ ಪ್ರಾಮಾಣಿಕ ರಾಜಕಾರಣಿ. ಮೌಲ್ಯಯುತ ರಾಜಕೀಯ ಜೀವನವನ್ನು ನಡೆಸಿಕೊಂಡು ಬಂದ ನಿಜಲಿಂಗಪ್ಪನವರು ನೀರಾವರಿ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದ್ದಾರೆ. ನಿಜಲಿಂಗಪ್ಪನವರ ತತ್ವಾದರ್ಶಗಳು ಸರ್ವರಿಗೂ ಸ್ಪೂರ್ತಿದಾಯಕವಾಗಿವೆ ಎಂದು ಹೇಳಿದ್ದಾರೆ.