ಬೆಂಗಳೂರು: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ಜಾರಿಗೊಳಿಸಿರೋದಾಗಿ ಹೇಳಲಾಗುತ್ತಿದೆ. ಈ ಮೂಲಕ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಗ್ ಶಾಕ್ ನೀಡಲಾಗಿದೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ, ಬಿಜೆಪಿ ಪಕ್ಷದಿಂದ ಉಚ್ಛಾಟಿಸುವಂತೆ ಒತ್ತಾಯ ಹೆಚ್ಚಾಗಿದೆ. ಈ ಹೊತ್ತಿನಲ್ಲೇ ಬಿಜೆಪಿಯ ಕೇಂದ್ರೀಯ ಶಿಸ್ತು ಪರಿಶೀಲನಾ ಸಮಿತಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ವಿವಾದಾತ್ಮಕ ಹೇಳಿಕೆ ಮೂಲಕ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿರುವ ಸಂಬಂಧ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದೆ ಎಂಬುದಾಗಿ ಬಿಜೆಪಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
Watch Video: ಫೆಂಗಲ್ ಚಂಡಮಾರುತ ಎಫೆಕ್ಟ್: ಲ್ಯಾಂಡ್ ಆಗಲು ಪರದಾಡಿ ಮತ್ತೆ ಹಾರಿದ ವಿಮಾನ, ವಿಡಿಯೋ ವೈರಲ್
ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ: ಡಿಸಿಎಂ ಡಿ.ಕೆ ಶಿವಕುಮಾರ್