ದಾವಣಗೆರೆ: ಬಿಜೆಪಿಯು ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಹೊರಟಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಸಂವುಧಾನದ ಮೂಲ ತತ್ವ ಜಾತ್ಯಾತೀತ.ಯಾವತ್ತು ಒಂದು ದೇಶ ಧರ್ಮದ ಆಧಾರದ ಮೇಲೆ ಆಡಳಿತ ನಡೆಸಿದರೆ ಖಂಡಿತ ಅದು ಅಭಿವೃದ್ಧಿ ಆಗುವುದಿಲ್ಲ.ಇತಿಹಾಸದಿಂದ ನಾವು ಪಾಠ ಕಲಿಯಬೇಕು.ನಮ್ಮ ದೇಶದಲ್ಲಿ ಕೂಡ ಆ ಜಾತ್ಯಾತೀತ ತತ್ವವನ್ನು ಕಲಿಸಬೇಕಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ದಾವಣಗೆರೆ ತಾಲ್ಲೂಕಿನ ರುದ್ರನಕಟ್ಟೆ ಗ್ರಾಮದಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಭಾರತದ ನೆರೆರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಪಘಾನಿಸ್ತಾನದಲ್ಲಿ ಏನಾಗಿದೆ ಅನ್ನೋದು ವಿಶ್ವಕ್ಕೆ ಗೊತ್ತಿದೆ .ಬಿಜೆಪಿ ಮತ್ತು ಆರ್ ಎಸ್ ಎಸ್ ನಂತಹ ಸಂಸ್ಥೆಗಳಿಂದ ಅಪಾಯ ಉಂಟಾಗಿದೆ ಎಂದರು.ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿದೆ.ಅದಕ್ಕೆ ನಾವು ಅವಕಾಶ ಮಾಡಿಕೊಡಬಾರದು ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.