ಹುಬ್ಬಳ್ಳಿ : ಮುಡಾ ಅದ್ರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಸಿಕ್ಯೂಶನ್ ಗೆ ನೀಡಿದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಇದೀಗ ಹೈಕೋರ್ಟ್ ವಜಾಗೊಳಿಸಿದೆ. ಇದರ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ರಾಜ್ಯದ ಹಲವೆಡೆ ಬಿಜೆಪಿ ಪ್ರತಿಭಟನೆ ನಡೆಸಿದೆ.
ಹೌದು ಮುಡಾದಲ್ಲಿ ಹಗರಣ ನಡಿದಿದೆ ಎಂದು ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದರು. ಇಂದು ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದ್ದು ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿದೆ, ಆ ಮೂಲಕ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಜಾಗೊಳಿಸಿದೆ. ಹಾಗಾಗಿ ಇದೀಗ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿ ಮತ್ತು ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ.