Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಎಚ್ಚರ, ಡಿಜಿಟಲ್ ವ್ಯಸನ ಅಪಾಯಕಾರಿ.! ಹೆಚ್ಚುತ್ತಿವೆ ನಿದ್ರಾಹೀನತೆ, ಮಾನಸಿಕ ಸಮಸ್ಯೆ!

11/02/2026 10:05 PM

ನಿಮ್ಮ ಬ್ಯಾಂಕ್ ನಿಮಗೆ ಪಾಲಿಸಿಯನ್ನ ತಪ್ಪಾಗಿ ಮಾರಾಟ ಮಾಡಿದ್ಯಾ? ಚಿಂತಿಸ್ಬೇಡಿ, 100% ಮರುಪಾವತಿಗೆ ‘RBI’ ಆದೇಶ!

11/02/2026 9:31 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ, 129 ಪಿಐ ವರ್ಗಾವಣೆ

11/02/2026 9:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ಬಿಜೆಪಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ: ಸಿಎಂ ಸಿದ್ಧರಾಮಯ್ಯ ಕಿಡಿ
KARNATAKA

ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ಬಿಜೆಪಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ: ಸಿಎಂ ಸಿದ್ಧರಾಮಯ್ಯ ಕಿಡಿ

By kannadanewsnow0901/05/2025 7:07 PM

ಹುಬ್ಬಳ್ಳಿ : ನಿರಂತರ ಬೆಲೆ ಏರಿಕೆ ಮೂಲಕ ಬಡವರ, ಮಧ್ಯಮ ವರ್ಗದ ದ್ವೇಷಿ ಆಗಿರುವ ಮೋದಿ ಸರ್ಕಾರ, ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ದೇಶ ವಿರೋಧಿ ವರ್ತನೆ, ಜನ ವಿರೋಧಿ ಆಡಳಿತ ಮತ್ತು ಬೆಲೆ ಏರಿಕೆಯ ಜನದ್ರೋಹವನ್ನು ಖಂಡಿಸಿ ನಡೆದ ಜನತಾ ಸಮಾವೇಶದಲ್ಲಿ ಮಾತನಾಡಿದರು.

ನರೇಂದ್ರ ಮೋದಿ ಪ್ರಧಾನಿ ಆದ ಬಳಿಕ ಅಕ್ಕಿಯಿಂದ ಚಿನ್ನದವರೆಗೂ ಎಲ್ಲದರ ಬೆಲೆ ಆಕಾಶಕ್ಕೆ ಏರಿದೆ. ದೇಶದ, ರಾಜ್ಯದ ಜನರಿಗೆ ಬಿಜೆಪಿ ಪರಿವಾರದ ಈ ಜನದ್ರೋಹ ಅರ್ಥವಾಗಿದೆ. ಇದನ್ನು ಮರೆ ಮಾಚಲು ತಮ್ಮ ಜನದ್ರೋಹವನ್ನು ಮುಚ್ಚಿಕೊಳ್ಳಲು ದೇಶದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದರು.

ಉಪ್ಪು, ಸಕ್ಕರೆ, ಟೀ, ಕಾಫಿ, ಅಕ್ಕಿ, ಬೇಳೆ, ಎಣ್ಣೆ, ಕಾಳು, ಚಿನ್ನ, ಬೆಳ್ಳಿ, ರಸಗೊಬ್ಬರ, ಔಷಧ, ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಸೇರಿ ಎಲ್ಲದರ ಬೆಲೆ ಆಕಾಶಕ್ಕೆ ಏರಿಸಿರುವ ಮೋದಿಯವರೇ ನೀವು ಯಾವುದನ್ನು ತಾನೆ ಬಿಟ್ಟಿದ್ದೀರಿ ಎಂದರು.

ಡಾಲರ್ ಬೆಲೆ 2014 ರಲ್ಲಿ 59 ರೂಪಾಯಿ ಇತ್ತು. ಇವತ್ತು 86 ರೂಪಾಯಿ ಆಗಿದೆ. ಇದಕ್ಕೆ ಯಾರು ಕಾರಣರು ಮೋದಿಯವರೇ ? ಇದೇನಾ ನಿಮ್ಮ ಅಚ್ಛೆ ದಿನ್ ಎಂದು ವ್ಯಂಗ್ಯವಾಡಿದರು.

50 ಕೆಜಿ ಸಿಮೆಂಟ್ ಬೆಲೆ 2014 ರಲ್ಲಿ 200 ಇದ್ದದ್ದು ಈಗ 450 ರೂ ಆಗಿದೆ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ 425 ಇದ್ದದ್ದು ಇಂದು 850 ದಾಟಿದೆ. ಶೇ100 ರಷ್ಟು ಬೆಲೆ ಏರಿಕೆ ಮಾಡಿದ್ದೀರಿ. ಜನದ್ರೋಹದ ಪರಮಾವಧಿ ಮುಂದುವರೆಸಿ ಸಿಲಿಂಡರ್ ಸಬ್ಸಿಡಿ ತೆಗೆದು ಹಾಕಿ ಬಡವರ ಮತ್ತು ಮಧ್ಯಮ ವರ್ಗದವರ ವಿರೋಧಿ ಆಗಿರುವ ಮೋದಿಯವರೇ ನಿಮ್ಮ ವಂಚನೆಗೆ ಕೊನೆಯೇ ಇಲ್ಲವೇ ಎಂದು ಪ್ರಶ್ನಿಸಿದರು.

ಪ್ರಹ್ಲಾದ್ ಜೋಶಿಯವರೇ ನೀವು ಮತ್ತು ಮೋದಿಯವರು ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಲೇ ಇದ್ದೀರಿ. ಆದರೆ, ನಿಮ್ಮ ಚಾಳಿಯನ್ನು ನಮ್ಮ ಮೇಲೆ ಹೊರಿಸಲು ಯತ್ನಿಸುತ್ತಿದ್ದೀರಿ.‌ ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರ ಹಾಲಿನ ದರ 4ರೂ ಹೆಚ್ಚಿಸಿ ಇಷ್ಟೂ ಹಣವನ್ನೂ ರೈತರಿಗೆ ವರ್ಗಾಯಿಸಿದ್ದೀವಿ. ಇದರಲ್ಲಿ ಹತ್ತು ಪೈಸೆ ಕೂಡ ಸರ್ಕಾರಕ್ಕೆ ಬರುವುದಿಲ್ಲ. ಆದರೆ, ನೀವು ಹೆಚ್ಚಿಸಿದ ಬೆಲೆ ಏರಿಕೆ ಯಾವ ಭಾರತೀಯರಿಗೆ ಸಿಗುತ್ತಿದೆ ಹೇಳಿ ಎಂದರು.

ಸಂವಿಧಾನ ಜಾರಿಯಾಗಿ 75 ವರ್ಷ ಕಳೆದರೂ ಅಸಮಾನತೆ, ತಾರತಮ್ಯ ಹೋಗಿಲ್ಲ ಎಂದರು.

ಆದ್ದರಿಂದ ನಾವು ನಮ್ಮ ಪ್ರಣಾಳಿಕೆಯಲ್ಲಿ ಆರ್ಥಿಕ, ಸಾಮಾಜಿಕ, ಜಾತಿ ಗಣತೆ ಬಗ್ಗೆ ಭರವಸೆ ಕೊಟ್ಟಿದ್ದೆವು. ನಾವು ಮಾಡಿದ ಘೋಷಣೆಯಂತೆ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಮತ್ತು ರಾಹುಲ್ ಗಾಂಧಿಯವರು ಪಾರ್ಲಿಮೆಂಟಿನಲ್ಲಿ ನಿರಂತರ ಧ್ವನಿ ಎತ್ತಿ ಹೋರಾಟ ನಡೆಸಿದ್ದರು. ಇದರ ಪರಿಣಾಮ ಈಗ ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಮಣಿದಿದೆ. ಇದು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರ ಸೈದ್ಧಾಂತಿಕ ಬದ್ಧತೆಗೆ ಸಿಕ್ಕ ಗೆಲುವು ಎಂದರು.

ICSE 10ನೇ ತರಗತಿ ಪರೀಕ್ಷೆಯಲ್ಲಿ ಶೇ.96.8 ಅಂಕ ಗಳಿಸಿದ ಸಾಗರದ ರಾಧಾಕೃಷ್ಣ ಶಾಲೆಯ ನಿಸರ್ಗ.ಬಿ

BREAKING: ಪಹಲ್ಗಾಮ್ ಉಗ್ರರ ದಾಳಿ: ನ್ಯಾಯಾಂಗ ತನಿಖೆಗೆ ಕೋರಿದ್ದ ಅರ್ಜಿ ಸ್ವೀಕರಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್ | Pahalgam Terror Attack

Share. Facebook Twitter LinkedIn WhatsApp Email

Related Posts

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ, 129 ಪಿಐ ವರ್ಗಾವಣೆ

11/02/2026 9:19 PM1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ ವರ್ಗಾವಣೆ | DYSP Transfer

11/02/2026 9:05 PM1 Min Read

ಮುರುಗನ ಆರಾಧನೆಯ ಹಿಂದೆ ಇಂಥದ್ದೊಂದು ರಹಸ್ಯ ಅಡಗಿದೆ

11/02/2026 8:51 PM2 Mins Read
Recent News

ಎಚ್ಚರ, ಡಿಜಿಟಲ್ ವ್ಯಸನ ಅಪಾಯಕಾರಿ.! ಹೆಚ್ಚುತ್ತಿವೆ ನಿದ್ರಾಹೀನತೆ, ಮಾನಸಿಕ ಸಮಸ್ಯೆ!

11/02/2026 10:05 PM

ನಿಮ್ಮ ಬ್ಯಾಂಕ್ ನಿಮಗೆ ಪಾಲಿಸಿಯನ್ನ ತಪ್ಪಾಗಿ ಮಾರಾಟ ಮಾಡಿದ್ಯಾ? ಚಿಂತಿಸ್ಬೇಡಿ, 100% ಮರುಪಾವತಿಗೆ ‘RBI’ ಆದೇಶ!

11/02/2026 9:31 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ, 129 ಪಿಐ ವರ್ಗಾವಣೆ

11/02/2026 9:19 PM

BREAKING : ಸಲ್ಮಾನ್ ಖಾನ್ ಸೋದರ ಮಾವ ‘ಆಯುಷ್ ಶರ್ಮಾ’ಗೆ ಬಿಷ್ಣೋಯ್ ಗ್ಯಾಂಗ್’ನಿಂದ ಬೆದರಿಕೆ ಇಮೇಲ್ : ವರದಿ

11/02/2026 9:18 PM
State News
KARNATAKA

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ, 129 ಪಿಐ ವರ್ಗಾವಣೆ

By kannadanewsnow0911/02/2026 9:19 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, ಮೇಜರ್ ಸರ್ಜರಿ ಮಾಡಲಾಗಿದೆ. ಬರೋಬ್ಬರಿ 23 ಡಿವೈಎಸ್ಪಿ ಹಾಗೂ…

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ ವರ್ಗಾವಣೆ | DYSP Transfer

11/02/2026 9:05 PM

ಮುರುಗನ ಆರಾಧನೆಯ ಹಿಂದೆ ಇಂಥದ್ದೊಂದು ರಹಸ್ಯ ಅಡಗಿದೆ

11/02/2026 8:51 PM

ವಂದೇ ಮಾತರಂ ಗೀತೆಗೆ ಬುನಾದಿ ಹಾಕಿದ ಪಕ್ಷ ನಮ್ಮದು: ಡಿಸಿಎಂ ಡಿ.ಕೆ.ಶಿವಕುಮಾರ್‌

11/02/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.