ಬೆಂಗಳೂರು : ಸ್ಯಾಂಟ್ರೋ ರವಿ ಜತೆ ಬಿಜೆಪಿ ಸಂಪರ್ಕದಲ್ಲಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಆರಗ ಜ್ಞಾನೇಂದ್ರ ಟಾಂಗ್ ನೀಡಿದ್ದಾರೆ.
ಕುಮಾರಸ್ವಾಮಿ ಹೇಳಿದಾಗಲೇ ರವಿ ವಿಷಯ ಗೊತ್ತಾಗಿದ್ದು, ಹೆಚ್ಡಿಕೆ ಸಿಎಂ ಆಗಿದ್ದಾಗಲೇ ಆತ ಹೆಚ್ಚು ವ್ಯವಹಾರ ನಡೆಸಿದ್ದನು ಎಂದು ಗೃಹ ಸಚಿವರು ಟಾಂಗ್ ನೀಡಿದ್ದಾರೆ.
ಸ್ಯಾಂಟ್ರೋ ರವಿ ಜತೆ ಬಿಜೆಪಿ ಸಂಪರ್ಕದಲ್ಲಿದೆ : ಹೆಚ್ಡಿಕೆ ಬಾಂಬ್
2018ರ ತಮ್ಮ ನೇತೃತ್ವದ ಸಮ್ಮಿಶ್ರ ಸರಕಾರವನ್ನು ಉರುಳಿಸಲು ಯಾರನ್ನೆಲ್ಲ ಬಳಕೆ ಮಾಡಿಕೊಳ್ಳಲಾಯಿತು? ಬಾಂಬೆಗೆ ಹೋದವರ ಮೋಜು ಮಸ್ತಿಗೆ ಸಕಲ ವ್ಯವಸ್ಥೆ ಮಾಡಿದರು ಯಾರು? ಎಂಬ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ ಮಾಡಿದರು.ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಿದ ಮಾಜಿ ಮುಖ್ಯಮಂತ್ರಿ ಅವರು ಮೈಸೂರು ಪೊಲೀಸರು ಎಫ್ ಐ ಆರ್ ದಾಖಲು ಮಾಡಿರುವ ಸಾಂಟ್ರೋ ರವಿ ಹಾಗೂ ರಾಜ್ಯ ಬಿಜೆಪಿ ಸರಕಾರದ ಕೆಲ ಪ್ರಭಾವಿ ಸಚಿವರ ನಡುವೆ ಇರುವ ಸಂಬಂಧ ಏನು? ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲೆಬೇಕು ಎಂದು ಆಗ್ರಹಪಡಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆವರು ದಮ್ಮು ತಾಕತ್ತು ಬಗ್ಗೆ ಮಾತನಾಡುತ್ತಾರೆ, ಇಲ್ಲಿ ಅವರು ದಮ್ಮು ತಾಕತ್ತು ತೋರಿಸಲಿ ಎಂದು ಟಾಂಗ್ ನೀಡಿದರು ಮಾಜಿ ಮುಖ್ಯಮಂತ್ರಿಗಳು.ಕರ್ನಾಟಕವನ್ನು ಉಳಿಸುವುದು, ರಕ್ಷಣೆ ಮಾಡುವುದು ಜೆಡಿಎಸ್ ಪಕ್ಷದಿಂದ ಸಾಧ್ಯ ಇಲ್ಲ ಎಂದು ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಈ ರಾಜ್ಯವು ಬಿಜೆಪಿ ನಾಯಕರಿಂದ ಉಳಿಯಲು ಸಾಧ್ಯವಿಲ್ಲ. ಈ ಸರಕಾರದ ಮಂತ್ರಿಗಳ ಹಣೆಬರಹ ಇಲ್ಲಿದೆ ನೋಡಿ ಎಂದು ಸಾಂಟ್ರೋ ರವಿ ಜತೆ ಪೋಸು ಕೊಟ್ಟಿರುವ ಮಂತ್ರಿಗಳ ಚಿತ್ರಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಿದರು.ಸಾಂಟ್ರೋ ರವಿ ಎಂಬಾತ ಅನೇಕ ಸಚಿವರ ಜತೆ ನಂಟು ಹೊಂದಿದ್ದಾನೆ. ಫೋಟೋಗಳನ್ನು ತೆಗೆಸಿಕೊಂಡಿದ್ದಾನೆ. ಆದರೆ, ಶಿಕ್ಷಣ ಸಚಿವ ನಾಗೇಶ್ ಅವರ ಜತೆ ಅದೇಗೆ ಹೋಗಿ ಫೋಟೋ ತೆಗೆಸಿಕೊಂಡನೋ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಅವರು ಅಚ್ಚರಿ ವ್ಯಕ್ತಪಡಿಸಿದರು.
BIGG NEWS : ಉದ್ಯಮಿ ‘ಪ್ರದೀಪ್’ ಆತ್ಮಹತ್ಯೆ ಪ್ರಕರಣ : ಆರೋಪಿ ‘ರಾಘವ ಭಟ್’ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಯಲು
BIGG NEWS : ಉದ್ಯಮಿ ‘ಪ್ರದೀಪ್’ ಆತ್ಮಹತ್ಯೆ ಪ್ರಕರಣ : ಆರೋಪಿ ‘ರಾಘವ ಭಟ್’ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಯಲು